ದೌರ್ಜನ್ಯಕ್ಕೊಳಗಾದ ಪರಿಶಿಷ್ಟರಿಗೆ ರೂ. 75.36 ಲಕ್ಷ ಪರಿಹಾರ ಧನ ವಿತರಣೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ, ಮಾ. 24– ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ ಒಟ್ಟು ರೂ. 75.36 ಲಕ್ಷ ಪರಿಹಾರ ಧನ ವಿತರಿಸಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಒಟ್ಟು 59 ಪ್ರಕರಣಗಳ ಪೈಕಿ 48 ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 2020 ರ ಏ. 1 ರಿಂದ […]