ಅಭಿವೃದ್ಧಿಗೆ ಗ್ರಾ. ಪಂ. ಸದಸ್ಯರು, ಪಿಡಿಓಗಳು ಶ್ರಮಿಸಲು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕರೆ

ಬಸವ ನಾಡು ವಿಜಯಪುರ- ಗ್ರಾ. ಪಂ. ಸದಸ್ಯರು ಮತ್ತು ಪಿಡಿಓಗಳು ಸರಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು. ಈ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ.ವಿಜಯಪುರ ನಗರದ ಶ್ರೀ ಸಂಗನ ಬಸವ ಕಲ್ಯಾಣ ಮಂಟಪದಲ್ಲಿ ನಡೆದ ವಿಜಯಪುರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ, ಅಹವಾಲು ಸ್ವೀಕಾರ ಮತ್ತು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದ […]

ಬಿ ಎಲ್ ಡಿ ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ರಸಪ್ರಶ್ನೆಯಲ್ಲಿ ಸಾಧನೆ

ಬಸವ ನಾಡು ವಿಜಯಪುರ- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಎ ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಬುರಗಿ ವಲಯ ಮಟ್ಟದ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ರಜತ ಮಹೋತ್ಸವ ಅಂಗವಾಗಿ ಕಲಬುರಗಿ ಸ್ಥಳೀಯ ಆರ್ ಕೆ ಎಂ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುರ್ವೇದ ಸ್ನಾತಕೊತ್ತರ ವೈದ್ಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ […]

ವಿಟಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು

ಬಸವ ನಾಡು ವಿಜಯಪುರ- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಮೂರು ಜನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 2019-20ನೇ ವರ್ಷದ ಪರೀಕ್ಷೆಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ಮೂವರು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ. ಅತುಲ ಆಯಿರೆ ತಿಳಿಸಿದ್ದಾರೆ. ಈ […]

ಆಮೆಗತಿಯಲ್ಲಿ ಸಾಗಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ- ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ನಡೆಯುತ್ತಿರುವ ರೇಲ್ವೆ ಮೇಲ್ಸೇತುವೆ(RoB) ಕಾಮಗಾರಿ ಸ್ಥಳಕ್ಕೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ವರ್ಷ ಮಾರ್ಚ್ ವೇಳೆಗೆ ಈ ಕಾಮಗಾರಿ ಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಬೇಕಿತ್ತು. ಆದರೆ, ಗುತ್ತಿಗೆದಾರ ಮತ್ತು ರೇಲ್ವೆ ಇಲಾಖೆಗಳ ನಡುವಿನ ಮುಸುಕಿನ ಗುದ್ದಾಟದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕಳೆದ ಸುಮಾರು ನಾಲ್ಕು ತಿಂಗಳಿಂದ ಬಹುತೇಕ ಸ್ಥಗಿತಗೊಂಡಿದೆ. ಪರಿಣಾಮ ಇಬ್ರಾಹಿಂಪೂರ ಸೇರಿದಂತೆ ರೇಲ್ವೆ ಹಳಿ ಆಚೆಗೆ ಇರುವ ನಾನಾ ಬಡಾವಣೆಗಳ ಜನರು ಸುತ್ತುವರೆದು […]