ವಿಟಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು

ಬಸವ ನಾಡು

ವಿಜಯಪುರ- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಮೂರು ಜನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.


ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 2019-20ನೇ ವರ್ಷದ ಪರೀಕ್ಷೆಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ಮೂವರು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ. ಅತುಲ ಆಯಿರೆ ತಿಳಿಸಿದ್ದಾರೆ.


ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಲೇಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಹೃಷಿಕೇಶ ಗೋಖಲೆ ತೃತೀಯ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಆಟೋಮೊಬೈಲ್ ವಿಭಾಗದಲ್ಲಿ ಸಂದೀಪ ಕದಂ 7ನೇ ಸ್ಥಾನ ಗಳಿಸಿದ್ದಾರೆ. ಅಲ್ಲದೇ, ಆರ್ಕಿಟೆಕ್ಚರ್ ವಿಭಾಗದಲ್ಲಿ ಶ್ರೇಯಾ ದೇಸಾಯಿ 8ನೇ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಡಾ. ಅತುಲ ಆಯಿರೆ ಸಂಸತ ವ್ಯಕ್ತಪಡಿಸಿದ್ದಾರೆ.


ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಬಿ ಎಲ್ ಡಿ ಸಂಸ್ಥೆಯ ಅಧ್ಯಕ್ಷ ಮತ್ತು ಮಾಜಿ ಸಚಿವ ಹಾಗೂ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ, ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನಿಲಗೌಡ ಪಾಟೀಲ, ನಿರ್ದೇಶಕ ಬಸನಗೌಡ ಪಾಟೀಲ, ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜು ಸಿಬ್ಬಂದಿ ಅಭಿನಂದಿಸಿದ್ದಾರೆ.

Leave a Reply

ಹೊಸ ಪೋಸ್ಟ್‌