ಬಿ ಎಲ್ ಡಿ ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ರಸಪ್ರಶ್ನೆಯಲ್ಲಿ ಸಾಧನೆ

ಬಸವ ನಾಡು

ವಿಜಯಪುರ- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಎ ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಬುರಗಿ ವಲಯ ಮಟ್ಟದ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.
ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ರಜತ ಮಹೋತ್ಸವ ಅಂಗವಾಗಿ ಕಲಬುರಗಿ ಸ್ಥಳೀಯ ಆರ್ ಕೆ ಎಂ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುರ್ವೇದ ಸ್ನಾತಕೊತ್ತರ ವೈದ್ಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ. ಜ್ಯೋತಿ ಬಬಲಿ, ಡಾ. ನಾಗರಾಜ ಮಡ್ಡಿಮನಿ. ಡಾ. ದೀಕ್ಷಾ ಪರಮಾರ, ಡಾ. ಪ್ರಿಯಾಂಕ ಬಿರಾದಾರ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಲ್ಲದೇ, ಬಿಎಎಂಎಸ್ ಸ್ನಾತಕ ವೈದ್ಯ ವಿದ್ಯಾರ್ಥಿ ವಿಭಾಗದಲ್ಲಿ ಅಮರನಾಥ ಬೇಕಲ, ಸುನೀತಾ ಬೆಳ್ಳಿಗೇರಿ, ಐಶ್ವರ್ಯ ಹಳ್ಳೂರ ಹಾಗೂ ಸಾವಿತ್ರಿ ಮಸಳಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಡಾ.ಸಂಜಯ ಕಡ್ಲಿಮಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.


ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಮಾಜಿ ಸಚಿವ ಹಾಗೂ ಹಾಲಿ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ, ನಿರ್ದೇಶಕ ಮತ್ತು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

ಹೊಸ ಪೋಸ್ಟ್‌