ಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ವಿಜಯಪುರ ಜಿಲ್ಲಾಧಿಕಾರಿ ಸಭೆ

ಬಸವ ನಾಡು

ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲೂಕುಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಿಂದಗಿಯಲ್ಲಿ ನಡೆದ ಈ ಸಭೆಯಲ್ಲಿ ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲೂಕುಗಳ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊರೊನಾ ಕುರಿತು ಈಗಾಗಲೇ ನೀಡಲಾಗಿರುವ ಗಂಟಲು ದ್ರವದ ಮಾದರಿಗಳನ್ನು ನಿಗದಿಯಂತೆ ಸಂಗ್ರಹಿಸಬೇಕು. ಕ್ವಾರಂಟೈನ್ ವಾಚ್ ಆಪ್‍ನಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅದೇ ರೀತಿ, ಕೊರೊನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವವರ ಬಗ್ಗೆಯೂ ಕಾಂಟ್ಯಾಕ್ಟ್ ಟ್ರೆಸಿಂಗ್ ಆಪ್ ಬಳಸಬೇಕು ಮತ್ತು ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡಿಕೊಳ್ಳದವರಿಗೆ ದಂಡ ವಿಧಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೋನಾ ಸೋಂಕಿತ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಗುರುತಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸಭೆಯಲ್ಲಿ ದೇವರ ಹಿಪ್ಪರಗಿ ಹಾಗೂ ಸಿಂದಗಿ ತಾಲೂಕಿನ ನಾನಾ ಇಲಾಖೆಗಳ ಮತ್ತು ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌