ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್- ಎಂ. ಬಿ. ಪಾಟೀಲ ಫೌಂಡೇಶನ್ ನಿಂದ ಕೊರೊನಾ ಸಹಾಯವಾಣಿ ಆರಂಭ

ಬಸವ ನಾಡು

ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಮತ್ತು ಎಂ. ಬಿ. ಪಾಟೀಲ ಫೌಂಡೇಶನ್ ಜಂಟಿಯ.ಾಗಿ ಕೊರೊನಾ ಸಹಾಯವಾಣಿ ಆರಂಭಿಸಿವೆ.
ವಿಜಯಪುರ ಜಿಲ್ಲೆಯಲ್ಲಿಯೂ ಕೊರೊನಾ 2ನೇ ಅಲೇ ತೀವ್ರವಾಗಿ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಗಳು ಸಿಗದೆ, ಸೂಕ್ತ ಚಿಕಿತ್ಸೆಯೂ ದೊರೆಯದೆ ಬಹಳಷ್ಟು ಜನ ಆತಂಕದಲ್ಲಿದ್ದಾರೆ. ಇಂಥ ಕಠಿಣ ಸಂದರ್ಭದಲ್ಲಿ ಕೊರೊನಾ ಸೋಂಕಿತರಿಗೆ ಸೂಕ್ತ ಸಲಹೆ ಮತ್ತು ನೆರವು ನೀಡಲು ಎಂ. ಬಿ. ಪಾಟೀಲ್ ಫೌಂಡೇಶನ್ನಿನ ಅಧ್ಯಕ್ಷ ಮತ್ತು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಹಾಗೂ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್ ಡೆಸ್ಕ್ ಪ್ರಾರಂಭಿಸಲು ನಿರ್ಧರಿಸಿದ್ದಾರೆ. ಈ ಸಹಾಯವಾಣಿ ದಿನದ 24 ಗಂಟೆ ಸಾರ್ವಜನಿಕರ ನೆರವಿಗೆ ಲಭ್ಯವಿರಲಿದೆ.


ಜನರಿಗೆ ತ್ವರಿತ ಸೇವೆ ಕಲ್ಪಿಸಿಕೊಡಲು ಸರಕಾರ ಜಿಲ್ಲಾಡಳಿತ ಎಲ್ಲಾ ಆಸ್ಪತ್ರೆಗಳ ವೈದ್ಯರು, ನರ್ಸ್ ಗಳು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆ. ಬಿಎಲ್ ಡಿಇ ಸಂಸ್ಥೆ ಸೇರಿದಂತೆ ವಿಜಯಪುರ ನಗರದ ಮತ್ತು ಜಿಲ್ಲೆಯ ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲರೂ ಈ ವಿಷಮ ಪರಿಸ್ಥಿತಿಯನ್ನು ಎದುರಿಸಲು ಶ್ರಮಿಸುತ್ತಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ. ಜೀವವಿದ್ದರೆ ಮಾತ್ರ ಜೀವನ. ಸದಾ ನಾವೆಲ್ಲ ನಿಮ್ಮೊಂದಿಗಿದ್ದೇವೆ. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಧೈರ್ಯವಾಗಿ ಈ ಕಠಿಣ ಸಂದರ್ಭ ಎದುರಿಸೋಣ ಎಂದು ಸುನಿಲಗೌಡ ಪಾಟೀಲ ಮತ್ತು ಸಂಗಮೇಶ ಬಬಲೇಶ್ವರ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಸಹಾಯದ ಅಗತ್ಯವಿರುವವರು ಸಹಾಯವಾಣಿ ಸಂಖ್ಯೆ 7483912680 ಮತ್ತು 7483959041 ಗೆ ಕರೆ ಮಾಡುವಂತೆ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಸಂತೋಷ್ ಇಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌