ಬಸವ ನಾಡು
ವಿಜಯಪುರ- ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಂಡು ಕೊರೊನಾದಿಂದ ಮುಕ್ತರಾಗಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ವಿಜಯಪುರ ನಗರದ ನಾನಾ ಕಡೆ ಕೊರೊನಾ ಲಸಿಕೆ ಅಭಿಯಾನ ಮುಂದುವರೆಸಿರುವ ಅವರು ನಾನಾ ಕಡೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಮನೆ- ಮನೆಗೆ ಉಚಿತ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮದ ಅಂಗವಾಗಿ ವಿಜಯಪುರ ನಗರದ ವಾರ್ಡ್ ಸಂಕ್ಯೆ 21ರ ಕನಕದಾಸ ಬಡಾವಣೆಯ ಶ್ರೀ ಹನುಮಾನ ಗುಡಿ ಹತ್ತಿರದ ಉದ್ಯಾನವನದಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಆರೋಗ್ಯ ಅಧಿಕಾರಿಗಳಾದ ಡಾ. ಬಾಲಕೃಷ್ಣ, ನ್ಯಾಯವಾದಿ ಎಸ್. ಎಸ್. ಸಜ್ಜನ, ಮುಖಂಡರಾದ ಚಂದ್ರು ಚೌಧರಿ, ಮಡಿವಾಳ ಯಳವಾರ, ಪುಟ್ಟು ಸಾವಳಗಿ, ಕಲ್ಲು ಬಿರಾದಾರ, ರಾಚು ಬಿರಾದಾರ, ನಾನಾಗೌಡ ಕಳಸಗೊಂಡ, ಮಲ್ಲು ಹರಣಾಳ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಶ್ರೀ ಸಿದ್ಧೇಶ್ವರ ಸಂಸ್ಥೆ, ಸಿದ್ಧಸಿರಿ ಸೌಹಾರ್ದ ಸಹಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಂತರ ವಾರ್ಡ ನಂ. 26 ರ ದಿವಟಗೇರಿ ಗಲ್ಲಿಯ ರಾಯರ ಮಠದ ಹತ್ತಿರ ಶ್ರೀ ಮಲ್ಲಿಕಾರ್ಜುನ ಗುಡಿ ಆವರಣದಲ್ಲಿ ಲಸಿಕೆ ಅಭಿಯಾನಕ್ಕೆ ಯತ್ನಾಳ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ. ಬಾಲಕೃಷ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಶ್ರೀ ಚಂದ್ರು ಚೌಧರಿ, ಶ್ರೀ ಕೀರಣ ಪಾಟೀಲ, ವಿಶ್ವನಾಥ ಹಿರೇಮಠ, ಅಮಿತ್ ಗುರುಡಕರ, ನಾಗರಾಜ ಮುಳವಾಡ, ರಾಜಶೇಖರ ಭಜಂತ್ರಿ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಶ್ರೀ ಸಿದ್ಧೇಶ್ವರ ಸಂಸ್ಥೆ, ಸಿದ್ಧಸಿರಿ ಸೌಹಾರ್ದ ಸಹಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನೂರಾರು ಜನರು ಈ ಸಂದರ್ಭದಲ್ಲಿ ಕೊರೊನಾ ಲಸಿಕೆಗಳನ್ನು ಪಡೆದುಕೊಂಡರು.