ವಿಜಯಪುರ ಜಿಲ್ಲಾಸ್ಪತ್ರೆಗೆ ನಾಲ್ಕು ಆಕ್ಸಿಜನ್ ಕಾನ್ಸಂಟ್ರೇಟರ್ ಹಸ್ತಾಂತರಿಸಿದ ಪೊಲೀಸರು

ಬಸವ ನಾಡು

ವಿಜಯಪುರ- ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿದ್ದು, ದಿನೇ ದಿನೇ ಕೊರೊನಾ ಸೋಂಕಿತಸ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಈ ಮಧ್ಯೆ ಆಕ್ಸಿಜನ್ ಕೊರತೆಯೂ ಹೆಚ್ಚಾಗಿದ್ದರಿಂದ ಕೊರೊನಾ ಸೋಂಕಿತರಿಗೆ ದೊಡ್ಡ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಎಡಿಜಿಪಿ ಸೀಮಾಂತ ಕುಮಾರ ಸಿಂಗ್ ಬೆಂಗಳೂರಿನ O2 ಎನ್ ಜಿ ಓ ಜೊತೆ ಸೇರಿ ರಾಜ್ಯದ ನಾನಾ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ O2 ಸಂಸ್ಥೆ ಸಿ ಎಸ್ ಆರ್ ಯೋಜನೆಯಡಿ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆಯಾಗಿ ನೀಡುತ್ತಿದೆ.
ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ‌ ಅನುಪಮ‌ ಅಗ್ರವಾಲ ಕೂಡ ಮುತುವರ್ಜಿ ವಹಿಸಿ‌ ನಾಲ್ಕು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ಮು ತರಿಸಿ ವಿಜಯಪುರ ಜಿಲ್ಲಾಡಳಿತಕ್ಕೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಇದರಿಂದ ಜನಸಾಮಾನ್ಯರಿಗೆ ಮತ್ತು ಕೊರೊನಾ ಸೋಂಕಿತರಿಗೆ ಅನುಕೂಲವಾಗಲಿ ಎಂದು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ‌ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ ಜಿಲ್ಲಾಸ್ಪತ್ರೆ ಸಿಎಂ ಡಾ. ಲಕ್ಕಣ್ಣವರ ವಿಜಯಪುರ ಎಎಸ್ಪಿ ಡಾ.‌ ರಾಮ ಲಕ್ಷ್ಮಣ ಆರಸಿದ್ಧಿ, ವಿಜಯಪುರ ಡಿವೈಎಸ್ಪಿ ಲಕ್ಷ್ಮಿನಾರಾಯಣ, ಗಾಂಧಿಚೌಕ್ ಸಿಪಿಐ ರವೀಂದ್ರ ನಾಯ್ಕೋಡಿ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌