ಕೊರೊನಾ ರೋಗಿಗಳ ಪ್ರಮಾಣಕ್ಕೆ ಅನುಗುಣವಾಗಿ ಖಾಸಗಿ ಆಸ್ಪತ್ರೆಗಳಿಗೆ ರೆಮಡಿಸಿವಿರ್ ಎಂಜೆಕ್ಷನ್ ಹಂಚಿಕೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ಬಸವ ನಾಡು

ವಿಜಯಪುರ- ಸರಕಾರದಿಂದ ವಿಜಯಪುರ ಜಿಲ್ಲೆಗೆ ಹಂಚಿಕೆಯಾದ ರೆಮಿಡಿಸಿವಿರ್ ಎಂಜೆಕ್ಷನ್ ನ್ನು ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಅಲ್ಲಿನ ರೋಗಿಗಳ ಪ್ರಮಾಣಕ್ಕನುಗುಣವಾಗಿ ಹಂಚಿಕೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.
ಮೇ 11 ರಂದು ನಾನಾ ಖಾಸಗಿ ಆಸ್ಪತ್ರೆಗಳಿಗೆ 2054 ರೆಮಿಡಿಸಿವಿರ್ ಎಂಜೆಕ್ಷನ್ ಹಂಚಿಕೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ, ಖಾಸಗಿ ಆಸ್ಪತ್ರೆಗಳಲ್ಲಿನ ಕೊರೊನಾ ರೋಗಿಗಳ ಸಂಖ್ಯೆಗೆ ಪ್ರಮಾಣಕ್ಕೆ ಅನುಗುಣವಾಗಿ ಈ ಔಷಧಿಯನ್ನು ನೇರವಾಗಿ ಆಯಾ ಖಾಸಗಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ವಿಜಯಪುರ ಜಿಲ್ಲೆಗೆ ಅವಶ್ಯವಿರುವ ಔಷಧಿಯನ್ನು ಪಡೆಯುವ ಕುರಿತು ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.
ವಿಜಯಪುರ ಜಿಲ್ಲಾಡಳಿತದಿಂದ ಹಂಚಿಕೆಯಾದ ರೆಮಿಡಿಸಿವರ್ ಔಷಧಿಯನ್ನು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಲು ಹಾಗೂ ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ರೆಮಿಡಿಸಿವಿರ್ ಎಂಜೆಕ್ಷನ್ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಲಾಗಿದೆ. ಯಾವುದೇ ಕಾರಣಕ್ಕೂ ವೈದ್ಯಾಧಿಕಾರಿಗಳು ಮತ್ತು ಆಸ್ಪತ್ರೆಗಳು ರೆಮಿಡಿಸಿವಿರ್ ಔಷಧಿಯನ್ನು ಶಿಫಾರಸ್ಸು ಮಾಡಿರುವ ರೋಗಿಗಳ ಸಂಬಂಧಿಕರನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಕಳುಹಿಸಬಾರದು. ಒಂದು ವೇಳೆ ಕಳುಹಿಸಿದರೆ ಅಂಥ ವೈದ್ಯಾಧಿಕಾರಿಗಳ ವಿರುದ್ಧ ಮತ್ತು ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಪಿಎಂಇ ಕಾಯ್ದೆಯನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌