5 ಲಕ್ಷ ರೆಮಿಡಿಸಿವರ್‌ ಖರೀದಿ-ಡಿಸಿಎಂ ಡಾ. ಅಶ್ವತ್ಥನಾರಾಯಣ

ಬಸವ ನಾಡು

ಬೆಂಗಳೂರು: ರಾಜ್ಯದಲ್ಲಿ ರೆಮಿಡಿಸಿವಿರ್ ಔಷಧಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 5 ಲಕ್ಷ ಡೋಸ್ ರೆಮಿಡಿಸಿವಿರ್‌ ಇಂಜೆಕ್ಷನ್ ಖರೀದಿಸಲಾಗುತ್ತಿದೆ. ಇದಕ್ಕಾಗಿ ಈ ಸಲುವಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಮತ್ತುಬ ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೊರಪನಾ ಎರಡನೇ ಅಲೆಯನ್ನು ಎದುರಿಸಲು ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಸಿಎಂ ಯಡಿಯೂರಪ್ಪ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಎಲ್ಲಿಯೂ ರೆಮಿಡಿಸಿವಿರ್‌ ಎಂಜೆಕ್ಷನ್ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ‌ ಅಲ್ಲದೇ, ಕಪರಪನಾ ನಿಯಂತ್ರಿಸಲು ಅಗತ್ಯವಾದ ಎಲ್ಲ ಔಷಧಿಗಳು, ಸಾಮಗ್ರಿಗಳು ಮತ್ತು ವೈದ್ಯಕೀಯ ಬಳಕೆಯ ವಸ್ತುಗಳ ಕೊರತೆ ಆಗದಂತೆ ಗಮನ ಹರಿಸಲಾಗಿದೆ ಎಂದು ತಿಳಿಸಿದರು.

15,000 ಆಮ್ಲಜನಕ ಸಾಂದ್ರಕಗಳ(oxygen concentrators) ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಇವುಗಳ ಪೈಕಿ ಈಗಾಗಲೇ 3000 ಆಮ್ಲಜನಕ ಸಾಂದ್ರಕಗಳ ಖರೀದಿಗೆ ಆದೇಶ ನೀಡಲಾಗಿದೆ. ಉಳಿದ 12000 ಆಮ್ಲಜನಕ ಸಾಂದ್ರಕಗಳ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.

ರಾಜ್ಯದಲ್ಲಿ ಈಗ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್‌ಗಳ ಸಂಖ್ಯೆಯನ್ನು 4000 ದಿಂದ 24000ಕ್ಕೆ ಹೆಚ್ಚಿಸಲಾಗಿದೆ. ಒಟ್ಟು 60000 ಆಕ್ಸಿಜನ್‌ ಬೆಡ್‌ಗಳಿವೆ. ಆಕ್ಸಿಜನ್‌ ಅಗತ್ಯ ಇಲ್ಲದವರು ಕೂಡ ಆಸ್ಪತ್ರೆ ಸೇರಿದ್ದರಿಂದ ಬೆಡ್‌ಗಳ ಕೊರತೆ ಉಂಟಾಗಿತ್ತು. ಇದನ್ನು ತಡೆಯಲು ದಾಖಲಾತಿಗೆ ಮುನ್ನ ಭೌತಿಕ ಪರೀಕ್ಷೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಡಾ‌. ಸಿ. ಎನ್. ಆಶ್ವತ್ಥನಾರಾಯಣ ತಿಳಿಸಿದರು.

ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿಯೊಂದು ಜಿಲ್ಲೆಗಳಲ್ಲಿ ವೈದ್ಯಕೀಯ ಅಗತ್ಯ ವಸ್ತುಗಳ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಇನ್ನು ಮಾರ್ಚ್ ತಿಂಗಳಲ್ಲಿ ದಿನಕ್ಕೆ 100 ರಿಂದ 150 ಮೆಟ್ರಿಕ್ ಟನ್ ಬೇಡಿಕೆಯಿದ್ದ ಆಮ್ಲಜನಕಕ್ಕೆ ಈಗ ಇದ್ದಕ್ಕಿದ್ದಂತೆ ದಿನಕ್ಕೆ 1200 ಮೆಟ್ರಿಕ್ ಟನ್‌ಗಳಿಗೆ ಹೆಚ್ಚಳವಾಗಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಡಾ. ಸಿ. ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಕೊರೊನಾ ಕರ್ತವ್ಯಕ್ಕೆ ಹಾಜರಾಗುವ ವೈದ್ಯರು ವಿದ್ಯಾರ್ಥಿಗಳು ಮತ್ತು ಇಂಟರ್ನಿಗಳಿಗೆ ಎಲ್ಲ ಸೌಲಭ್ಯ ಕಲ್ಪಸಲಾಗುತ್ತಿದೆ. ಅವರಿಗೆ ಸಂಬಳ ಮತ್ತು ಪ್ರೋತ್ಸಾಹ ಧನ ನೀಡುವುದರ ಜೊತೆಗೆ ಅವರ ಆರೋಗ್ಯ ಮತ್ತು ವಿಶ್ರಾಂತಿಯ ಮೇಲೂ ನಿಗಾ ಇಡಲಾಗಿದೆ ಎಂದು ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ಇದೇ ಸಂದರ್ಭದಲ್ಲಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌