ಬಸವ ನಾಡು
ವಿಜಯಪುರ: ಕೊರೊನಾ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಬೆಳಿಗ್ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಅನುಪಮ ಅಗ್ರವಾಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ ಮತ್ತು ಇತರ ಗಣ್ಯರು ಬಸವೇಶ್ವರ ಚೌಕಿನಲ್ಲಿರುವ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೇರಿದಂತೆ ಸಮಾಜದ ಮುಖಂಡರು ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈರಣ್ಣ ಆಶಾಪುರೆ, ಭೀಮರಾಯ ಜಿಗಜಿಣಗಿ, ಸಿದ್ಧು ರಾಯಣ್ಣವರ ಮುಂತಾದವರು ಉಪಸ್ಥಿತರಿದ್ದರು.