ಅಣ್ಣನ ಜನ್ಮಸ್ಥಳದಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ

ಬಸವ ನಾಡು

ವಿಜಯಪುರ- ಅಣ್ಣ ಬಸವಣ್ಣನವರ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ‌ ಬಸವ ಜನ್ಮಸ್ಥಳದಲ್ಲಿ ಸರಳವಾಗಿ ಬಸವ ಜಯಂತಿಯನ್ನು ಆಚರಿಸಲಾಯಿತು.

ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಬಸವ ಜನ್ಮ ಸ್ಮಾರಕದಲ್ಲಿ ಸಂಪ್ರದಾಯದಂತೆ ವಿರಕ್ತಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿರು.

ಬಸವರಾಜ ಹಾರಿವಾಳ, ಶ್ವೇತಾ ಬಸವರಾಜ ಕಿಣಗಿ, ಸ್ಪಂದನಾ ರವೀಂದ್ರ ಕಿಣಗಿ ಅವರು ಸಾಮಾಜಿಕ ಅಂತರ ಕಾಯ್ದುಕೊಂಡು ಬಾಲ ಬಸವೇಶ್ವರರ ಬೆಳ್ಳಿಯ ಮೂರ್ತಿಯನ್ನು ತೊಟ್ಟಿಲಿನಲ್ಲಿ‌ ಹಾಕಿ ತೂಗಿ ನಾಮಕಾರಣ ಮಾಡುವ ಮೂಲಕ ತೊಟ್ಟಿಲೋತ್ಸವ ಕಾರ್ಯಕ್ರಮ ನೆರವೇರಿಸಿದರು.

ಭಕ್ತರು ಸ್ಮಾರಕದ ಹೊರಗೆ ಬಸವಣ್ಣನವರಿಗೆ ನೈವೆಧ್ಯ ಅರ್ಪಿಸಿ, ಕರ್ಪೂರ ಬೆಳಗಿ, ಟೆಂಗಿನಕಾಯಿ‌ ಒಡೆದು ಕಾಯಿ‌ ಹಿಂತಿರುಗಿದರು.

ಇದಕ್ಕೂ ಮುಂಚೆ ಪಟ್ಟಣದ ಮೂಲ ನಂದೀಶ್ವರ (ಬಸವೇಶ್ವರ) ದೇವಾಲಯ ಆವರಣದಲ್ಲಿ ಷಟಸ್ಥಲ ಧ್ವಜಾರೊಹಣ ನೆರವೇರಿತು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಶಿವಾನಂದ ಪಾಟೀಲ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಪ್ರತಿ ವರ್ಷ ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಕೊರೊನಾ ಎರಡನೇ ಅಲೆಯ ನಿಯಂತ್ರಣದ ಹಿನ್ನೆಲೆಯಲ್ಲಿ ಲಾಕ್‍ಡೌನ ಜಾರಿಯಾಗಿದೆ. ಆದ್ದರಿಂದ ಈ ಸಲ ಕೇವಲ ನಾಲ್ಕು ಜನ ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಂಡು ಅತೀ ಸರಳವಾಗಿ ಬಸವ ಜಯಂತಿಯನ್ನು ಆಚರಿಸಿರುವುದಾಗಿ ತಿಳಿಸಿದರು.

ಕೊರೊನಾ ನಿಯಂತ್ರಣದ ಹಿನ್ಬೆಲೆಯಲ್ಲಿ ಪ್ರತಿಯೊಬ್ಬರು ಮನೆಯಿಂದ ಹೊರ ಬರದೇ ಮನೆಯಲ್ಲಿಯೇ ಬಸವ ನಾಮಸ್ಮರಣೆ ಮಾಡುವ ಮೂಲಕ ಬಸವ ಜಯಂತಿಯನ್ನು ಸರಳವಾಗಿ ಆಚರಿಸುವಂತೆ ಶಾಸಕ ಶಿವಾನಂದ ಪಾಟೀಲ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಮುಖಂಡರಾದ ಬಸವರಾಜ ಗೊಳಸಂಗಿ, ವೈ. ಡಿ. ನಾಯ್ಕೋಡಿ, ಈರನಗೌಡ ಪಾಟೀಲ, ಸುರೇಶಗೌಡ ಪಾಟೀಲ, ಈರಣ್ಣ ಬಿರಾದಾರ, ಶಿರಸ್ತೆದಾರ ಶ್ರೀನಿವಾಸ ಕಲಾಲ, ಬಸವೇಶ್ವರ ದೇವಸ್ಥಾನದ ಮೇಲ್ವಿಚಾರಕ ಬಸವರಾಜ ಕಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌