ಬಸವ ನಾಡು
ವಿಜಯಪುರ- ಕೊರೊನಾ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಬೇಕೆನ್ನುವ ಐಸಿಎಂಆರ್ ಸಲಹೆಯ ಕುರಿತು ಸಿಎಂ ನಿರ್ದಾರ ಕೈಗೊಳ್ಳಲಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಕುರಿತು ತಜ್ಞರೊಂದಿಗೆ ಚರ್ಚಿಸಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ ಸಿಎಂ ನಿರ್ಣಯ ಕೈಗೊಳ್ಳಲಿದ್ದಾರೆ. ಈ ಕುರಿತು ಈಗಲೇ ಹೇಳಲು ಸಾಧ್ಯವಿಲ್ಲ. ಸಾಧಕ ಬಾಧಕ ತಿಳಿದುಕೊಂಡು ತಜ್ಞರ ಅಭಿಪ್ರಾಯದಂತೆ ಸಿಎಂ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ವಿಜಯಪುರ ವಿಮಾನ ನಿಲ್ದಾಣದ ಎರಡನೇ ಹಂತದ ಕಾಮಗಾರಿ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ. ರೂ. 125 ಕೋ. ವೆಚ್ಚದಲ್ಲಿ ಟರ್ಮಿನಲ್ ಬಿಲ್ಡಿಂಗ್ ಸೇರಿದಂತೆ ಹಲವು ಕಾಮಗಾರಿ ಎರಡನೇ ಹಂತದಲ್ಲಿ ನಡೆಯಲಿವೆ. ಈ ವಾರದಲ್ಲಿ ಕಾಮಗಾರಿಗೆ ಟೆಂಡರ್ ಕರೆಯಲಾಗುವದು. ಈಗಾಗಲೇ ಮೊದಲ ಹಂತದ ರೂ.100 ಕೋ. ವೆಚ್ಚದ ಕಾಮಗಾರಿ ಭರದಿಂದ ಸಾಗಿದೆ. ನಿಗದಿತ ಅವಧಿಗೂ ಮುಂಚಿತವಾಗಿ ಕಾಮಗಾರಿ ಪೂರ್ಣವಾಗುವ ವಿಶ್ವಾಸವಿದೆ. ಇನ್ನುಳಿದ ರೂ. 125 ಕೋ. ವೆಚ್ಚದ ಕಾಮಗಾರಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ತಿಳಿಸಿದರು.