ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಕ್ರಮ- ಡಿಸಿಎಂ ಡಾ. ಸಿ. ಎನ್. ಅಶ್ವತ್ಥ ನಾರಾಯಣ

ಬಸವ ನಾಡು

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕೆ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೊವ್ಯಾಕ್ಸಿನ್ ಲಸಿಕೆ ತಯಾರಿಕೆ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಮತ್ತು ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜಧಾನಿಗೆ ಹತ್ತಿರದಲ್ಲಿರುವ ಕೋಲಾರ ಜಿಲ್ಲೆಯ ಮಾಲೂರಿಗೆ ಕೋವ್ಯಾಕ್ಸಿನ್ ತಯಾರಿಕೆ ಘಟಕ ಬರುತ್ತಿದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ‌ ಈಗಾಗಲೇ ಸರಕಾರ ಎಲ್ಲ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ ಪೂರ್ಣ ಮಾಡುತ್ತಿದ್ದು, ಕಟ್ಟಡ ಕಾಮಗಾರಿಗಳು ಶುರುವಾಗಿವೆ. ಈ ಕಾಮಗಾರಿಗಳು ತ್ವರಿತವಾಗಿ ಪೂರ್ಣವಾದ ನಂತರ ಆದಷ್ಟು ಬೇಗ ಲಸಿಕೆ ತಯಾರಿಕೆ ಘಟಕ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಈಗಾಗಲೇ ಕೋವಿಶೀಲ್ಡ್ ತಯಾರಿಸುವ ಸೀರಂ ಮಾತ್ರವಲ್ಲದೆ, ಯಾವುದೇ ಲಸಿಕೆ ತಯಾರಿಕೆ ಕಂಪನಿ ರಾಜ್ಯಕ್ಕೆ ಬಂದು ಘಟಕ ಸ್ಥಾಪಿಸಲು ಮುಂದಾದರೆ ಸರಜಾರ ಅಗತ್ಯವಾದ ಎಲ್ಲ ಸಹಕಾರ ನೀಡಲಿದೆ. ಅತ್ಯಂತ ಕ್ಷಿಪ್ರಗತಿಯಲ್ಲಿ ಎಲ್ಲ ಅನುಮತಿಗಳನ್ನು ನೀಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ಪ್ರತಿಯೊಂದು ವಿಧಾನ ಸಭೆ ಕ್ಷೇತ್ರಗಳ್ಲಿ 100 ಹಾಸಿಗೆಗಳ ಆಸ್ಪತ್ರೆ

ಇದೇ ವೇಳೆ, ಕಪರೊನಾ ಎರಡನೇ ಅಲೆ ಮತ್ತು ಸಂಭನೀಯ ಮೂರನೇ ಅಲೆ ಎದುರಿಸಲು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲ ಸೌಕರ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯೋನ್ಮುಖವಾಗಿದೆ. ‌ ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲೂ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಇರಲೇಬೇಕು. ಅದರಲ್ಲಿ ಆಕ್ಸಿಜನ್ ಮತ್ತು ಐಸಿಯು ಬೆಡ್ʼಗಳೂ ಇರಬೇಕು. ‌ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದರು

40 ಕೋಟಿ ಡೋಸ್ ಲಸಿಕೆ ಉತ್ಪಾದನೆ

ನೀತಿ ಆಯೋಗ ಈಗಾಗಲೇ ತಿಳಿಸಿರುವಂತೆ ಅಗಸ್ಟ್ ತಿಂಗಳಲ್ಲಿ 40 ಕೋಟಿ ಡೋಸ್ ಲಸಿಕೆ ದೇಶದಲ್ಲಿ ಉತ್ಪಾದನೆಯಾಗಲಿದೆ. ಇದು ಆಶಾದಾಯಕ ಬೆಳವಣಿಗೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಾಗಲಿದೆ. ಇದುವರೆಗೂ ದೇಶದ ನಾಗರಿಕರಿಗೆ 19 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಜೊತೆಗೆ ಆರೋಗ್ಯ ಇಲಾಖೆ ಮತ್ತು ಇತರ ಇಲಾಖೆ ಸಿಬ್ಬಂದಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.‌‌ ಈವರೆಗೆ ಎಲ್ಲ ಮೂಲಗಳಿಂದ ಬಂದಿರುವ ನೆರವಿನ ಪ್ರಮಾಣವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರವು ಲಸಿಕೆ ತಯಾರಿಕೆ ಕಂಪನಿಗಳಿಗೆ ಸಾಕಷ್ಟು ಉತ್ತೇಜನ ನೀಡುತ್ತಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಗಳ ಮೇಲಿರುವ ಪೇಟೆಂಟ್ ವಿನಾಯಿತಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಅವರು ನಾನಾ ದೇಶಗಳ ನಾಯಕರ ಜತೆ ಈಗಾಗಲೇ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಹೀಗಾಗಿ ಇನ್ನಷ್ಟು ಲಸಿಕೆ ತಯಾರಿಕೆ ಘಟಕಗಳು ರಾಜ್ಯಕ್ಕೆ ಬರಲಿವೆ ಎಂದು ಡಿಸಿಎಂ ಡಾ. ಸಿ. ಎನಗ. ಅಶ್ವತ್ಥನಾರಾಯಣ ತಿಳಿಸಿದರು.

ಸಿಎಸ್ಆರ್ ನೆರವು

ಕಾರ್ಪೋರೇಟ್ ವಲಯದಿಂದ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಸಿಎಸ್ಆರ್ ನೆರವು ಬರುತ್ತಿದೆ. ಹಣದ ರೂಪದಲ್ಲಿ ಮತ್ತು ಸಾಮಗ್ರಿ ರೂಪದಲ್ಲಿ ನೆರವು ಹರಿದು ಬರುತ್ತಿದೆ. ಅಷ್ಟೇ ಅಲ್ಲ, ಮುಖ್ಯಮಂತ್ರಿ ಪರಿಹಾರ ನಿಧಿಗೂ ಹಣ ಸಂದಾಯವಾಗುತ್ತಿದೆ. ಕೇಂದ್ರ ಸರಕಾರದಿಂದಲೂ ಸಾಕಷ್ಟು ನೆರವು ಸಿಗುತ್ತಿದೆ. ಈಗಾಗಲೇ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ ಅವರು, ಅಂತಾರಾಷ್ಟ್ರೀಯ ಮಟ್ಟದಿಂದಲೂ ರಾಜ್ಯಕ್ಕೆ ಸಾಕಷ್ಟು ನೆರವು ಬಂದಿದೆ. ಈ ವಿಭಾಗದಲ್ಲಿ ಹಿರಿಯ ಅಧಿಕಾರಿಗಳಾದ ಸೆಲ್ವಕುಮಾರ ಮತ್ತು ಸಿಎಸ್ಆರ್ ಉಸ್ತುವಾರಿ ಅಧಿಕಾರಿ ಉಮಾ ಮಹಾದೇವನ ಅವರು ಕೆಲಸ ಮಾಡುತ್ತಿದ್ದಾರೆ ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ಇದೇ ಸಂದರ್ಭದಲ್ಲಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌