ಬಸವ ನಾಡು
ವಿಜಯಪುರ: ರಾಜ್ಯಾದ್ಯಂತ ಈಗ ಕೊರೊನಾ ಎರಡನೇ ಭೀಕರವಾಗಿದ್ದು, ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತ ಸಾಗಿದೆ.
ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರಕಾರ ಜನತಾ ಕರ್ಫ್ಯೂ ಮತ್ತು ಲಾಕಡೌನ್ ಜಾರಿ ಮಾಡಿದೆ. ಈ ಅವಧಿಯಲ್ಲಿ ರಾಜ್ಯದ 23 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹರಡುವ ಪ್ರಮಾಣ ಹೆಚ್ಚಾಗಿದ್ದರೆ, ಉಳಿದ ಏಳು ಜಿಲ್ಲೆಗಳಲ್ಲಿ ಕಡಿಮೆಯಾಗಿದೆ.
ಈ ಏಳು ಜಿಲ್ಲೆಗಳಲ್ಲಿ ಬಸವ ನಾಡು ವಿಜಯಪುರ ಜಿಲ್ಲೆಯೂ ಒಂದಾಗಿರುವುದು ಸಂತಸ ತಂದಿದೆ.
ವಿಜಯಪುರ ಜಿಲ್ಲೆಯಲ್ಲಿ ಪ್ರತಿನಿತ್ಯ 300 ರಿಂದ 500ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದರೂ 23 ಜಿಲ್ಲೆಗಳಿಗೆ ಹೋಲಿಸಿದಾಗ ಹರಡುವಿಕೆ ಪ್ರಮಾಣ ಕಡಿಮೆ ಇದೆ. ಐ ಐ ಎಸ್ ಸಿ ಈ ಕುರಿತು ನಡೆಸಿದ ಅಧ್ಯಯನದಲ್ಲಿ ಈ ಮಾಹಿತಿ ಪತ್ತೆಯಾಗಿದೆ ಎಂದು ವಿಜಯವಾಣಿ ದಿನ ಪತ್ರಿಕೆ ವರದಿ ಮಾಡಿದೆ.
ಜನತಾ ಕರ್ಫ್ಯೂ ಮತ್ತು ಲಾಕಡೌನ್ ನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಅನುಪಮ ಅಗ್ರವಾಲ ಮತ್ತು ಜಿ. ಪಂ. ಸಿಇಓ ಗೋವಿಂದರೆಡ್ಡಿ ನೇತೃಯ್ವದ ತಂಡ ಸಮರ್ಥವಾಗಿ ಜಾರಿ ಮಾಡಿದ್ದು ಕೊರೊನಾ ಸೋಂಕು ಹರಡುವ ಪ್ರಮಾಣಕ್ಕೆ ಕಡಿವಾಣ ಹಾಕಲು ಕಾರಣವಾಗಿದೆ.
ರಾಜ್ಯದ 23 ಜಿಲ್ಲೆಗಳಲ್ಲಿ ಜನತಾ ಕರ್ಫ್ಯೂ ಮತ್ತು ಲಾಕಡೌನ್ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗಿದೆ. ಆದರೆ, ಬೆಂಗಳೂರು ನಗರ, ಬೀದರ, ಚಿತ್ರದುರ್ಗ, ದಕ್ಷಿಣ ಕನ್ನಡ, ಕಲಬುರಗಿ, ಉಡುಪಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಿರಿವುದು ಐ ಐ ಎಸ್ ಸಿ ಅಧ್ಯಯನದಲ್ಲಿ ಬಹಿರಂಗವಾಗಿದೆ. ಇದಕ್ಕಾಗಿ ವಿಜಯಪುರ ಜಿಲ್ಲಾಡಳಿತವನ್ನು ಅಭಿನಂದಿಸಲೇಬೇಕಿದೆ.
ವಿಜಯಪುರ ಜಿಲ್ಲಾಡಳಿತ ಕೊರೊನಾ ನಿಯಂತ್ರಣಕ್ಕಾಗಿ ಮತ್ತು ಜಿಲ್ಲೆಗಳ ಸಾಲಿನಲ್ಲಿ ವಿಜಯಪುರ ಜಿಲ್ಲೆಯೂ ಸೇರಿರುವುದು ಹೆಮ್ಮೆಯ ವಿಷಯ.
ಮುಂಬರುವ ದಿನಗಳಲ್ಲಿ ವಿಜಯಪುರ ಜಿಲ್ಲೆ ಕೊರೊನಾ ಸೋಂಕು ಹರಡುವ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳ ಸಾಲಿನಲ್ಲಿ ಮೊದಲ ಸ್ಥಾನಕ್ಕೆ ಬರಲಿ ಎಂದು ಆಶಿಸೋಣ.
ಜಿಲ್ಲಾಡಳಿತದ ಮುಂದಿರುವ ಸವಾಲುಗಳು
ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಈಗಲೂ ಕೂಡ ಪ್ರತಿನಿತ್ಯ 400 ಸರಾಸರಿಯಲ್ಲಿ ಕೊರೊನಾ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ಆಕ್ಸಿಜನ್ ಕೊರತೆ, ಬೆಡ್ ಗಳ ಸಮಸ್ಯೆ ಮತ್ತು ರೆಮಿಡಿಸಿವಿರ್ ಎಂಜೆಕ್ಷನ್ ಕೊರತೆ ಮುಂದುವರೆದಿದಿದೆ. ವಿಜಯಪುರ ಜಿಲ್ಲಾಡಳಿತ ಇವುಗಳ ಪೂರೈಕೆಗಾಗಿ ಹೆಣಗಾಡುತ್ತಿದೆ. ಆದರೆ, ಸರಕಾರದಿಂದ ಅಗತ್ಯಕ್ಕೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳೂ ಕೇಳಿ ಬರುತ್ತಿವೆ.
ಆಡಳಿತಾರೂಢ ಸರಕಾರದ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತಂದು ಅಗತ್ಯಕ್ಕನುಗುಣವಾಗಿ ಆಕ್ಸಿಜನ್ ಮತ್ತು ಇತರ ಔಷಧಿಗಳು ಪೂರೈಕೆಯಾಗುವಂತೆ ಮಾಡಿದರೆ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ತಡೆಗೆ ಸಾಕಷ್ಟು ಉಪಯೋಗವಾಗಲಿದೆ.