ರವಿವಾರವೂ ಜಿಲ್ಲೆಯಲ್ಲಿ ಸಂಚರಿಸಿ ಕೊರೊನಾ ನಿಯಂತ್ರಣ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ- ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಿದ್ದರೂ, ಪ್ರತಿದಿನ ಸರಾಸರಿ 300 ರಿಂದ 400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವಿಜಯಪುರ ಜಿಲ್ಲಾಡಳಿತ ಸರಣಿ ಸಭೆಗಳು, ತಪಾಸಣೆಗಳ ಮೂಲಕ ಸಾಕಷ್ಟು ಶ್ರಮ ವಹಿಸುತ್ತಿದೆ. ರವಿವಾರ ವಾರದ ರಜೆ ಇದ್ದರೂ ಕೂಡ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಎಸ್ಪಿ ಅನುಪಮ ಅಗ್ರವಾಲ ನಾನಾ ಕಡೆ ತಿರುಗಾಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ರವಿವಾರ […]