ಬೆಂಗಳೂರಿನ ಎಎಸ್‌ಸಿ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಕುರಿತು ಸೇನಾಧಿಕಾರಿಗಳ ಜೊತೆ ಡಿಸಿಎಂ ಅಶ್ವತ್ಥನಾರಾಯಣ ಚರ್ಚೆ
ಬೆಂಗಳೂರು: ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್ ಆಸ್ಪತ್ರೆ ಬಳಿ ಇರುವ ಆರ್ಮಿಗೆ ಸೇರಿರುವ ಎಎಸ್‌ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಕುರಿತು ಸೇನೆ ಅಧಿಕಾರಿಗಳ ಜೊತೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಮತ್ತು ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ಮಾತುಕತೆ ನಡೆಸಿದ್ದಾರೆ. ಎಎಸ್‌ಸಿ ಕಮಾಂಡರ್ ಲೆಫ್ಟಿನೆಂಟ್ ಬಿ. ಕೆ. ರೆಸಪಾಸ್ ವಾಲ್ ಅವರೊಂದಿಗೆ ಮಾತುಕತೆ ನಡೆಸಿದ ಅವರು, ಎಎಸ್‌ಸಿ ಸೆಂಟರ್‌ನಲ್ಲಿ ಕನಿಷ್ಠ 500 ಬೆಡ್‌ಗಳ ಕೋವಿಡ್ ಕೇರ್ ಕೇಂದ್ರ […]
ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ ಅನುದಾನಿತ ಶಾಲೆಗಳಿಗೆ 132 ದಿನದವರೆಗೆ ಬೇಕಾಗುವ ಆಹಾರ ಧಾನ್ಯಗಳ ವಿತರಣೆ
ವಿಜಯಪುರ: ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಬೇಕಾದ 132 ದಿನದ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಉಪ್ಪು ಮತ್ತು 55 ದಿನಗಳಿಗೆ ಪ್ರತಿ ಮಗುವಿಗೆ 1 ಪಾಕೇಟ್ ಎಣ್ಣೆ (ಸೂರ್ಯಕಾಂತಿ ಎಣ್ಣೆ) ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಶಿಕ್ಷಣಾಧಿಕಾರಿ ಎಸ್. ಎಸ್. ಮುಜಾವರ(ಅದಾಯೋ) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಎಲ್ಲಾ ಮುಖ್ಯ ಶಿಕ್ಷಕರು ನಿಯಮಾನುಸಾರವಾಗಿ ಪಾಲಕ-ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಈ ಆಹಾರ ಧಾನ್ಯ […]
ಫೀಲ್ಡ್ ಕಮಾಂಡರ್ ರೀತಿ ಕೆಲಸ ಮಾಡುವಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಪ್ರಧಾನಿ ಸೂಚನೆ- ಬಸವರಾಜ ಬೊಮ್ಮಾಯಿ
ಬೆಂಗಳೂರು: ಎಲ್ಲ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೊರೊನಾ ವಿರುದ್ಧ ಫೀಲ್ಡ್ ಕಮಾಂಡರ್ ರೀತಿಯಲ್ಲಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜತೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ನಂತರ ಸಚಿವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದ್ದಾರೆ. ರಾಜ್ಯ ಸರಕಾರದ ಮುಖ್ಯ […]
ಇಂಡಿ ಉಪವಿಭಾಗಾಧಿಕಾರಿ, ಸಿಂದಗಿ ತಹಸೀಲ್ದಾರ ಧಾಳಿ- ಭೀಮಾ ತೀರದಲ್ಲಿ ಸುಮಾರು ರೂ. 5.31 ಲಕ್ಷ ಮೌಲ್ಯದ ಅಕ್ರಮ ಮರಳು ವಶ
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿ ರಾಹುಲ್ ಸಿಂಧೆ ಅವರ ನೇತೃತ್ವದಲ್ಲಿ ಸಿಂದಗಿ ತಹಸೀಲ್ದಾರ ಮತ್ತು ಪೋಲಿಸ್ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಭೀಮಾ ತೀರದಲ್ಲಿ ಧಾಳಿ ನಡೆಸಿ ಅಕ್ರಮ ಮರಳನ್ನು ವಶಪಡಿಸಿಕೊಂಡಿದೆ. ಸಿಂದಗಿ ತಾಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮ ವ್ಯಾಪ್ತಿಯಲ್ಲಿ ಭೀಮಾ ನದಿ ಪಾತ್ರದಲ್ಲಿ ಈ ಧಾಳಿ ನಡೆಸಿದ ಅಧಿಕಾರಿಗಳು 629 ಕ್ಯೂಬಿಕ್ ಮೀಟರ್ ಅನಧಿಕೃತ ಮರಳನ್ನು ವಶಕ್ಕೆ ಪಡೆದಿದೆ. ಎರಡು ಪ್ರತ್ಯೇಕ ಕಡೆ ನಡೆದ ಈ ಧಾಳಿಯಲ್ಲಿ […]
ಸದ್ದುಗದ್ದಲವಿಲ್ಲದೆ ಕೊರೊನಾ ಸಂತ್ರಸ್ತರ ಸೇವೆಯಲ್ಲಿ ಅಮ್ಮನ ಮಡಿಲು, ಎಂ. ಬಿ. ಪಾಟೀಲ ಫೌಂಡೇಶನ್- ಪ್ರತಿದಿನ ಬರುತ್ತಿವೆ ಹಲವಾರು ಕರೆಗಳು
ವಿಜಯಪುರ: ಕೊರೊನಾ ಎರಡನೇ ಅಲೆ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಜನರನ್ನು ಹೈರಾಣಾಗಿಸಿದೆ. ಕೊರೊನಾ ಸೋಂಕಿತರು ಬೆಡ್ ಗಳು ಸಮಸ್ಯೆ, ಔಷಧಿಗಳ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಆರಂಭವಾಗುತ್ತಿದ್ದಂತೆ ಸೋಂಕಿತರಿಗೆ ಸ್ಪಂದಿಸಲು ಏ. 20 ರಂದು ವಿಜಯಪುರದ ಅಮ್ಮನ ಚಾರಿಟೆಬಲ್ ಟ್ರಸ್ಟ್ ಮತ್ತು ಎಂ. ಬಿ. ಪಾಟೀಲ ಫೌಂಡೇಶನ್ ಸಹಾಯವಾಣಿ ಆರಂಭಿಸಿದ್ದವು. ಈಗ ಈ ಸಹಾಯವಾಣಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ ಈ ಸಹಾಯವಾಣಿಗೆ 1200ಕ್ಕೂ ಹೆಚ್ಚು ಕರೆಗಳು ಬಂದಿದ್ದು, […]
ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರರಿಗೂ ಕೊರೊನಾ ವ್ಯಾಕ್ಸಿನ್ ಸೌಲಭ್ಯ- ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದರೂ ರಾಜ್ಯಾದ್ಯಂತ ಹಲವಾರು ಜನ ಹಿರಿಯ ನಾಗರಿಕರು ಆಧಾರ ಕಾರ್ಡ್ ಇಲ್ಲದ ಕಾರಣ ಈವರೆಗೆ ಲಸಿಕೆಯಿಂದ ವಂಚಿತರಾಗಿದ್ದರು. ಈ ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಹಿರಿಯ ನಾಗರಿಕರ ಸಚಿವೆ ಶಶಿಕಲಾ ಜೊಲ್ಲೆ ಸಹಾಯಕ್ಕೆ ಧಾವಿಸಿದ್ದಾರೆ. ಈಗ ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದಾರೆ. ಸಚಿವೆಯ ಮನವಿಗೆ ಆರೋಗ್ಯ ಸಚಿವ ಡಾ. ಸುಧಾಕರ ಕೂಡ […]