ನಾನಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಕೊಡುಗೆಯಾಗಿ ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಜಿಲ್ಲೆಯ ನಾನಾ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ. ಮೇ 19ರ ವರೆಗೆ ನಾನಾ ದಾನಿಗಳಿಂದ, ಸಂಘ-ಸಂಸ್ಥೆಗಳಿಂದ ಸ್ವೀಕರಿಸಲಾದ ಹಾಗೂ ಕಚೇರಿಯಿಂದ ಖರೀದಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು ವೆಂಟಿಲೇಟರ್ಸ ಗಳನ್ನು […]

ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದಲ್ಲಿ ಆರು ಕಡೆ ಉಚಿತ ಚಿಕಿತ್ಸೆ- ಒಂದು ಕೋಟಿ ಕೊಲ್ಚಿಸಿನ್ ಮಾತ್ರೆ ಪೂರೈಸಲು ಕೇಂದ್ರ ಒಪ್ಪಿಗೆ- ಆಶ್ವತ್ಥನಾರಾಯಣ

ಬೆಂಗಳೂರು: ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಡಿಸಿಎಂ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬಂಟರ ಸಂಘವು ಹೋಮ್‌ ಐಸೋಲೇಷನ್‌ ಆಗಿರುವ ಕೊರೊನಾ ಸೋಂಕಿತರಿಗಾಗಿ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಚಾಲನೆ ಕೊಟ್ಟ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್‌ ಫಂಗಸ್‌ ಕಾಯಿಲೆಗೆ ಬಳಸಲಾಗುವ ಔಷಧಿಗೆ ಕೊರತೆ ಇಲ್ಲ. ಈಗಾಗಲೇ ಕೇಂದ್ರದಿಂದ 1000 ವೈಲ್ಸ್‌ […]

ರೆಡ್ ಕ್ರಾಸ್ ಸೊಸಾಯಿಟಿಯಿಂದ ವಿಜಯಪುರ ಜಿಲ್ಲಾಡಳಿತಕ್ಕೆ ವೆಂಟಿಲೇಟರ್, ಆಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರ

ವಿಜಯಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕ ರಾಜ್ಯ ಶಾಖೆಯಿಂದ ಒಂದು ವೆಂಟಿಲೇಟರ್ ಮತ್ತು 2 ಆಕ್ಸಿಜನ್ ಕಾನ್ಸಂಟ್ರೆಟರ್ ಗಳನ್ನು ನೀಡಲಾಯಿತು. ರಾಜ್ಯ ಘಟಕದಿಂದ ಬಂದ ಈ ಸಲಕರಣೆಗಳನ್ನು ವಿಜಯಪುರ ರೆಡ್ ಕ್ರಾಸ್ ಸೊಸಾಯಿಟಿ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಕೊರೊನಾ ಪೀಡಿತ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್ ಮತ್ತು ಆಕ್ಸಿಜನ ಕಾನ್ಸಂಟ್ರೆಟರ್ ಗಳು ಪ್ರಮುಖ ಪಾತ್ರ ವಹಿಸುವುದರಿಂದ ಭಾರತೀಯ ರೆಡ್ ಕ್ರಾಸ್ ಸೊಸಾಯಿಟಿ ಈ ಸಲಕರಣೆಗಳನ್ನು ವಿಜಯಪುರ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕಿತರ ಉಪಚಾರಕ್ಕೆ ನೀಡಿದೆ. ಸಲಕರಣೆಗಳನ್ನು […]

ಕೊರೊನಾ ಸಂದರ್ಭದಲ್ಲಿ ಟೀಕೆ ಮಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಕೊಡುಗೆ ಏನು? ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನೆ

ವಿಜಯಪುರ: ಕೊರೊನಾ ಎರಡನೇಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮರ್ಥವಾಗಿ ಎದುರಿಸುತ್ತಿವೆ. ಈ ಕಾರ್ಯದಲ್ಲಿ ಕಾಂಗ್ರೆಸ್ ಕೊಡುಗೆ ಏನು? ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯನ್ನು ಸಮರ್ಪಕವಾಗಿ ನಿಭಾಯಿಸಲು ದೇಶದಲ್ಲಿ ಈ ಮುಂಚೆ ಇದ್ದ 26 ಸಾವಿರ ವೆಂಟಿಲೇಟರ್ ಬೆಡ್ ಗಳನ್ನು 80 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾ ನಿಯಂತ್ರಣಕ್ಕೆ […]

ಮನೆಯಲ್ಲಿ ಕೂಡುವ ಬದಲು ಕ್ರಿಯಾಶೀಲರಾಗಿ ಕೆಲಸ ಮಾಡಿ ಇಲ್ಲವೆ ಕುರ್ಚಿ ಖಾಲಿ ಮಾಡಿ- ಸಿಎಂ ವಿರುದ್ಧ ಮತ್ತೆ ಯತ್ನಾಳ ಗುಡುಗು

ವಿಜಯಪುರ: ಮನೆಯಲ್ಲಿ ಸುಮ್ಮನೆ ಕೂಡುವ ಬದಲು ಕ್ರಿಯಾಶೀಲರಾಗಿ ಕೆಲಸ ಮಾಡಿ. ಇಲ್ಲವೇ, ಕುರ್ಚಿ ಖಾಲಿ ಮಾಡಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ವಿರುದ್ಧ ಮತ್ತೆ ಗುಡುಗಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಸಿಎಂ ಕೇವಲ ಜಿಂದಾಲ್ ಗೆ ಜಮೀನು ನೀಡಲು ಕುರ್ಚಿಯ ಮೇಲೆ ಕುಳಿತಕೊಳ್ಳಬೇಡಿ. ಕೆಲಸವಾಗದಿದ್ದರೆ ನಿವೃತ್ತಿಯಾಗಿ. ಮೂರನೇ ಅಲೆಯ ಬಗ್ಗೆ ಏನೂ ತಯಾರಿ ಮಾಡಿಲ್ಲ. ಎರಡನೇ ಅಲೆಯೇ ಈಗ ಹೈರಾಣಾಗಿಸಿದೆ […]

ಕೊರೊನಾ ನಿಯಂತ್ರಣದಲ್ಲಿ ವಿಜಯಪುರಕ್ಕೆ ಮತ್ತೋಂದು ಗರಿ- ಗುಣಮುಖರಾಗುವವರ ಸಂಖ್ಯೆಯಲ್ಲಿ ರಾಜ್ಯದಲ್ಲೇಯ 2ನೇ ಸ್ಥಾನ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ಈಗ ಕೊರೊನಾ ನಿಯಂತ್ರಣದಲ್ಲಿ ಮತ್ತೋಂದು ಯಶಸ್ಸು ಸಾಧಿಸಿದೆ. ಕೊರೊನಾ ಸೋಂಕಿತರು ಗುಣಮುಖರಾಗುತ್ತಿರುವ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ಸೋಂಕಿತರಲ್ಲಿ ಶೇ. 88.01 ರಷ್ಟು ಜನ ಗುಣಮುಖರಾಗಿದ್ದು, ಕರ್ನಾಟಕದಲ್ಲಿ ಬಸವ ನಾಡು ಎರಡನೇ ಸ್ಥಾನದಲ್ಲಿದೆ. ಬೀದರ ಜಿಲ್ಲೆಯಲ್ಲಿ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದ್ದು, ಶೇ. 89.19 ರಷ್ಟು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಬೀದರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಹಾವೇರಿ ಜಿಲ್ಲೆಯಲ್ಲಿ ಶೇ. 87.71 […]