ಕೊರೊನಾ ಸಂದರ್ಭದಲ್ಲಿ ಟೀಕೆ ಮಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಕೊಡುಗೆ ಏನು? ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನೆ

ವಿಜಯಪುರ: ಕೊರೊನಾ ಎರಡನೇಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮರ್ಥವಾಗಿ ಎದುರಿಸುತ್ತಿವೆ. ಈ ಕಾರ್ಯದಲ್ಲಿ ಕಾಂಗ್ರೆಸ್ ಕೊಡುಗೆ ಏನು? ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯನ್ನು ಸಮರ್ಪಕವಾಗಿ ನಿಭಾಯಿಸಲು ದೇಶದಲ್ಲಿ ಈ ಮುಂಚೆ ಇದ್ದ 26 ಸಾವಿರ ವೆಂಟಿಲೇಟರ್ ಬೆಡ್ ಗಳನ್ನು 80 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಆಕ್ಸಿಜನ್ ಕೊರತೆಯಾಗದಂತೆ ಏರ್ ಕ್ರಾಫ್ಟ್, ರೇಲ್ವೆ ಮತ್ತು ಹಡಗುಗಳನ್ನು ಬಳಸಲಾಗುತ್ತಿದೆ. ಕೊರೊನಾ ನಿಯಂತ್ರಣ ಸಲುವಾಗಿ ಅಲ್ಪ ಅವಧಿಯಲ್ಲಿ ಕೇಂದ್ರ ಸರಕಾರವು ಎರಡು ಲಸಿಕೆಗಳನ್ನು ಅಭಿವೃದ್ದಿಪಡಿಸಿ 18.50 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ವಿಜಯಪುರ ನಗರದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಕಳೆದ ಇಪ್ಪತೆರಡು ದಿನಗಳಿಂದ ಕೊರೊನಾ ಸೋಂಕಿತರಿಗೆ, ಸಂಬಂಧಿಕರಿಗೆ ಹಾಗೂ ಬಡವರಿಗೆ ಗಜಾನನ ಮಹಾಮಂಡಳದ ವತಿಯಿಂದ ಅನ್ನದಾಸೋಹ ಮಾಡುತ್ತಿದ್ದಾರೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಾರ್ಡ್ ವಾರು ಲಸಿಕಾ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಶವ ಸಂಸ್ಕಾರದಂಥ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ವಿಜಯಪುರದಲ್ಲಿ ಬಿಜೆಪಿ ನಾಯಕರ ಸುದ್ದಿಗೋಷ್ಠಿ

ಲಾಕ್ ಡೌನ್ ವಿಸ್ತರಣೆ ಕುರಿತು ಮತ್ತು ಬಡವರಿಗೆ ಪ್ಯಾಕೇಜ್ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದವರು ರೂ. 100 ಕೋ. ಹಣವನ್ನು ಸರಕಾರಕ್ಕೆ ನೀಡಿರೋದು ಸರಕಾರದ ಹಣವೇ ಆಗಿದೆ. ಇಂಥ ಸಂಧಿಗ್ದ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಏನು? ಎಂದು ಪ್ರಶ್ನಿಸಿದ ಅವರು, ಲಸಿಕೆ ಕುರಿತು ಅಪ್ರಪಚಾರ‌ ಮಾಡೋ ಮೂಲಕ ದೇಶದ ಜನತೆಗೆ ತಪ್ಪು ಸಂದೇಶ ಕೊಟ್ಟರು ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಲಿ ನಡೆಸಿದರು.

ವಿಜಯಪುರದಲ್ಲಿ ಬಿಜೆಪಿ ನಾಯಕರ ಸುದ್ದಿಗೋಷ್ಠಿ

ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಕರ್ನಾಟಕ ರಾಜ್ಯ ಸಾವಯವ ಹಾಗೂ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬೆಳಗಾವಿ ಬಿಜೆಪಿ ವಿಭಾಗೀಯ ಸಂಘಟಕ ಚಂದ್ರಶೇಖರ ಕವಟಗಿ, ಬಿಜೆಪಿ ಜಿಲ್ಲಾ ವಕ್ತಾರ ರವೀಂದ್ರ ಲೋಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಶಿವರುದ್ರ ಬಾಗಲಕೋಟ ಮತ್ತು ಮಾದ್ಯಮ ಪ್ರಮುಖ ವಿಜಯ ಜೋಶಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌