ಕೊರೊನಾ ನಿಯಂತ್ರಣ- ಗ್ರಾ. ಪಂ. ಕಾರ್ಯ ಪಡೆಗಳ ಕೆಲಸಕ್ಕೆ ವಿಜಯಪುರ ಜಿಲ್ಲಾಧಿಕಾರಿ ಶ್ಲಾಘನೆ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 212 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ಪಡೆಗಳು ಈಗಾಗಲೇ ಸಭೆ ನಡೆಸಿ, ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಢಚಣದಲ್ಲಿ ಕಾರ್ಯಪಡೆ ಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ತಾವು ಈಗಾಗಲೇ ಗುಣಕಿ, ಝಳಕಿ, ಹೋರ್ತಿ ಈ ಮೂರು ಹಳ್ಳಿಗಳಲ್ಲಿ ಭೇಟಿ ನೀಡಿದ್ದು, ಗ್ರಾಮ ಪಂಚಾಯಿತಿ ಕಾರ್ಯ ಪಡೆಗಳು ಯಾವ ರೀತಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಿರುವುದಾಗಿ […]
ಕೊರೊನಾ ನಿಯಂತ್ರಣದಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಸಹಭಾಗಿತ್ವ ಅಗತ್ಯ- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು: ಖಾಸಗಿ ಸಂಘ-ಸಂಸ್ಥೆಗಳ ಸಹಭಾಗಿತ್ವವಿದ್ದಾಗ ಮಾತ್ರ ಪರಿಣಾಮಕಾರಿಯಾಗಿ ಕೊರೊನಾ ನಿಯಂತ್ರಣ ಸಾಧ್ಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ರಾಜೀವ್ ಗಾಂಧಿ ಮಹಾವಿದ್ಯಾಲಯದಲ್ಲಿ ಆರಂಭವಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಸಂಘ-ಸಂಸ್ಥೆಗಲ ಸಹಯೋಗದಿಂದ ಕೊರೊನಾ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಹೀಗಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಖಾಸಗಿ ಸಂಘ-ಸಂಸ್ಥೆಗಳು ಮುಂದಾಗಬೇಕು. ಈ ನಿಟ್ಟಿನಲ್ಲಿ […]
ಕೊರೊನಾ ಗೆದ್ದವರ ಕಥೆ- ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ತಾನು ಗುಣವಾಗಿದ್ದಷ್ಟೇ ಅಲ್ಲ, ತಾಯಿಯನ್ನು ಬದುಕಿಸಿದ ಮಗನ ಸ್ಟೋರಿ ಇದು
ವಿಜಯಪುರ: ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗಿದ್ದರೆ, ಮತ್ತೋಂದೆಡೆ ಕೊರೊನಾದಿಂದ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಬಸವ ನಾಡಿನ ಜನರ ಪಾಲಿಗೆ ಸ್ವಲ್ಪ ನೆಮ್ಮದಿಯನ್ನು ಮೂಡಿಸಿದೆ. ಇದೇ ರೀತಿ ಕೊರೊನಾ ಸೋಂಕಿತನಾಗಿ ಆಸ್ಪತ್ರೆ ಸೇರಿದ್ದ ವಿಜಯಪುರ ನಗರದ ಜಲನಗರದ ಯುವಕ ಮತ್ತು ವ್ಯಾಪಾರಿ ಸಂಜೀವ ಗುನ್ನಾಪುರ ಸಾಕಷ್ಟು ಸಂಕಷ್ಟಗಳ ನಡುವೆಯೂ ತಾವೇ ನೈತಿಕ ಸ್ಥೈರ್ಯ ಹೆಚ್ಚಿಸಿಕೊಂಡು ಗುಣಮುಖರಾಗಿದ್ದಾರೆ. ಅಂಥವರ ಬಗ್ಗೆ ಬೆಳಕು ಚೆಲ್ಲಲು ಬಸವ ನಾಡು ನಿರ್ಧರಿಸಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ಅನುಭವ ಹಂಚಿಕೊಂಡು […]
ಲಾಕಡೌನ್ ಯಶಸ್ಸಿಗಾಗಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಆದರೂ ಜನರು ಲಾಕಡೌನ್ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟರ್ ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ […]