ನಿಜವಾಗುತ್ತಿದೆ ಶಾಸಕ ಎಂ. ಬಿ. ಪಾಟೀಲ ನುಡಿದ ಭವಿಷ್ಯ- ಶಾಸಕರ ಸಲಹೆಯನ್ನು ಧನಾತ್ಮಕವಾಗಿ ಪರಿಗಣಿಸಿ ಕಾರ್ಯೋನ್ಮುಖವಾಗಿದೆ ಜಿಲ್ಲಾಡಳಿತ

ವಿಜಯಪುರ: ಗ್ರಾಮೀಣ ಭಾಗದಲ್ಲಿ ಮನೆ ಮನೆ ಸಮೀಕ್ಷೆ ನಡೆಸಿ ಕೊರೊನಾ ಸೋಂಕಿನ ಲಕ್ಷಣವುಳ್ಳವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡದಿದ್ದರೆ ವಿಜಯಪುರ ನಗರಕ್ಕಿಂತಲೂ ಗ್ರಾಮೀಣ ಭಾಗಕ್ಕೆ ಸೋಂಕು ಹೆಚ್ಚು ಹರಡಲಿದೆ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಮೇ 15 ರಂದು ನುಡಿದಿದ್ದ ಭವಿಷ್ಯ ಈಗ ನಿಜವಾಗುತ್ತಿದೆ. ಏಕೆಂದರೆ, ಈವರೆಗೆ ವಿಜಯಪುರ ನಗರದಲ್ಲಿ ಶೇ. 80 ರಷ್ಟು ಕಂಡು ಬರುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಈಗ ಶೇ. 15 ರಿಂದ ಶೇ. […]

ವಿಜಯಪುರ ಜಿಲ್ಲೆಯಲ್ಲಿ ಈಗ ಗ್ರಾಮೀಣ ಭಾಗದಲ್ಲಿಯೇ ಶೇ. 80 ರಷ್ಟು ಕೊರೊನಾ ಸೋಂಕಿತರು ಪತ್ತೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಈಗ ಜಿಲ್ಲೆಯಲ್ಲಿ ವಿಜಯಪುರ ನಗರಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ ಎಂದು ತಿಳಿಸಿದರು. ಈ ಮುಂಚೆ ವಿಜಯಪುರ ನಗರದಲ್ಲಿ ಶೇ. 80 ರಷ್ಟು ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿದ್ದವು. ಆದರೆ, ಈಗ ನಗರದಲ್ಲಿ ಈ ಪ್ರಮಾಣ ಸೇ. 15 ರಿಂದ 20ಕ್ಕೆ ಇಳಿದಿದೆ. ಈಗ ಪರಿಸ್ಥಿತಿ ಬದಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಶೇ. 80 ರಷ್ಟು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಮಾಹಿತಿ ನೀಡಿದರು. ವಿಜಯಪುರ […]

ಫ್ರೀ ಆಮ್ಲಜನಕ ಸಿಲಿಂಡರ್ ಸರಬರಾಜು ವ್ಯವಸ್ಥೆ ಮೂಲಕ 300ಕ್ಕೂ ಹೆಚ್ಚು ಜನರ ಜೀವ ಉಳಿಸಲು ನೆರವಾದ ಗುಮ್ಮಟ ನಗರಿಯ ಶಕೀಲ ಸುತಾರ ಆ್ಯಂಡ್ ಟೀಂ

ವಿಜಯಪುರ: ಕೊರೊನಾ ಎರಡನೇ ಅಲೆ ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯ ಜನರ ಪಾಲಿಗಂತೂ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ.  ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಒಂದೆಡೆಯಾದರೆ, ಮತ್ತೋಂದೆಡೆ ಆಕ್ಸಿಜನ್ ಸಮಸ್ಯೆ ಮತ್ತೋಂದೆಡೆ.  ಇಂಥ ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೊರೊನಾ ಸೋಂಕಿತರ ಪಾಲಿಗೆ ಗುಮ್ಮಟ ನಗರಿ ವಿಜಯಪುರದ ಯುವಕನೊಬ್ಬ ಆಪದ್ಭಾಂಧವನಾಗಿದ್ದಾನೆ.  ಈ ಯುವಕ ಸಮಾನ ಮನಸ್ಕ ಸ್ನೇಹಿತರ ಪಡೆ ಕಟ್ಟಿಕೊಂಡು ಕೊರೊನಾ ಸೋಂಕಿತರ ನೆರವಿಗೆ ಟೊಂಕಕಟ್ಟಿ ನಿಂತಿದ್ದಾನೆ. ವಿಜಯಪುರ ನಗರದ ಕೆ. ಸಿ. ಮಾರ್ಕೆಟ್ ಪೀಠೋಪಕರಗಳ ಖ್ಯಾತ ವ್ಯಾಪಾರಿ ಶಕೀಲ್‌ […]

ವಿಜಯಪುರ ಜಿಲ್ಲೆಯಲ್ಲಿ ಮತ್ತೆ 17 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ- ಆತಂಕದಲ್ಲಿ ಜನತೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಮತ್ತೆ 17 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೊರೊನಾ ಜೊತೆ ಈಗ ಬ್ಲ್ಯಾಕ್ ಫಂಗಸ್ ಕೂಡ ಕಾಣಿಸಿಕೊಂಡಿದ್ದು, ಈಗ ಹೊಸದಾಗಿ 17 ಜನರಲ್ಲಿ ಈ ರೋಗ ಪತ್ತೆಯಾಗಿದೆ.  ಇದರಿಂದಾಗಿ ಈವರೆಗೆ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 67 ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಂತಾಗಿದೆ.  ಇವರಲ್ಲಿ ಈಗಾಗಲೇ 7 ಜನರು ಬ್ಲ್ಯಾಕ್ ಫಂಗಸ್‌ನಿಂದ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ ಎಂದು […]

ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ- ಹೊರ ರಾಜ್ಯಗಳಿಂದ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಶಿಗ್ಗಾವಿ: ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಜನರು ಇನ್ನು ಮುಂದೆ ಕೊರೊನಾ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಈ ನಿಯಮವನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಲಾಕಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಲವಾರು ನಿರ್ಬಂಧ ವಿಧಿಸಲಾಗಿದೆ. ಎಲ್ಲ ಕಡೆ ಪೊಲೀಸ್ ನಾಕಾ ಬಂದಿ ಹಾಕಲಾಗಿದೆ. […]

ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ

ವಿಜಯಪುರ: ಬಸವ ನಾಡು ಈಶಾನ್ಯ ಸಾರಿಗೆ ಸಂಸ್ಥೆಯ ವಿಜಯಪುರ ಘಟಕದ 18 ರಿಂದ 44 ವರ್ಷದ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ ನೀಡಿದರು. ವಿಜಯಪುರ ನಗರದ ಸೆಟಲೈಟ್ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲಕರು, ನಿರ್ವಾಹಕುರ ಮತ್ತು ಇತರ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣನಪ್ಪ ಕುರುಬರ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪೂರ ವಿಭಾಗದ 100 ಸಿಬ್ಬಂದಿಗಳಿಗೆ ಲಸಿಕೆ ಹಾಕುವ […]

ಕೊರೊನಾ ಭಯ, ಚಿಂತೆಯನ್ನು ದೂರ ಮಾಡಲು ಮನಸ್ಸಿಗೆ ಸ್ವಯಂ ಸೂಚನೆ’ಗಳನ್ನು ನೀಡಿ ನಿಶ್ಚಿಂತೆಯಿಂದಿರಿ- ಸಂದೀಪ ಅಳಸಿ

ಸಂದೀಪ ಅಳಸಿ ವಿಜಯಪುರ: ಇಂದು ಇಡೀ ದೇಶ ಕೊರೊನಾ ಎರಡನೇ ಅಲೆಯಿಂದ ತತ್ತರಿಸಿ ಹೋಗಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳುಲ್ಲಿ ಕೊರೊನಾ ಬಗ್ಗೆ ಓದಿ, ವಿಡಿಯೋಗಳನ್ನು ನೋಡಿ ಜನರು ಗುಣಮುರಾಗುವವರಿಗಿಂತ ಸಮಸ್ಯೆ ಎದುರಿಸುತ್ತಿರುವ ಸೋಂಕಿತರ ಬಗ್ಗೆಯೇ ಹೆಚ್ಚಿನ ಘಟನಾವಳಿಗಳತ್ತ ಗಮನ ಹರಿಸುತ್ತಿದ್ದಾರೆ. ಇದು ಜನಸಾಮಾನ್ಯರ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಉಂಟಾಗಿದ್ದು, ಆಕ್ಸಿಜನ್ ಕೊರತೆ, ಬೆಡ್ ಕೊರತೆಯಂಥ ವಿಚಾರಗಳು ಜನಸಾಮಾನ್ಯರಲ್ಲಿ ಭಯ, ಚಿಂತೆ, ನಿರಾಶೆ ಹೆಚ್ಚಾಗಲು ಕಾರಣವಾಗಿದೆ. ಇದರಿಂದಾಗಿ ಕೊರೊನಾ ಸೋಂಕಿಗಿಂತಲೂ ಅದರ ಭಯದಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆಯೇ […]

ಲಾಕಡೌನ್ ಕಟ್ಟುನಿಟ್ಟಾಗಿ ಜಾರಿಗೆ ಪೊಲೀಸರಿಗೆ ಗೃಹ ಸಚಿವ ಬೊಮ್ಮಾಯಿ ಖಡಕ್ ಸೂಚನೆ

ಹುಬ್ಬಳ್ಳಿ: ರಾಜ್ಯಾದ್ಯ ಲಾಕಡೌನ್ ನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಲಾಕಡೌನ್ ನ್ನು ಮತ್ತೆ 14 ದಿನ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಲಾಕಡೌನ್ ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ […]