ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ

ವಿಜಯಪುರ: ಬಸವ ನಾಡು ಈಶಾನ್ಯ ಸಾರಿಗೆ ಸಂಸ್ಥೆಯ ವಿಜಯಪುರ ಘಟಕದ 18 ರಿಂದ 44 ವರ್ಷದ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ ನೀಡಿದರು.

ವಿಜಯಪುರ ನಗರದ ಸೆಟಲೈಟ್ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲಕರು, ನಿರ್ವಾಹಕುರ ಮತ್ತು ಇತರ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣನಪ್ಪ ಕುರುಬರ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪೂರ ವಿಭಾಗದ 100 ಸಿಬ್ಬಂದಿಗಳಿಗೆ ಲಸಿಕೆ ಹಾಕುವ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಾಗಿದೆ. ಸಂಸ್ಥೆಯ ಸಿಬ್ಬಂದಿಗಳು ಮುಂಚೂಣಿಯಲ್ಲಿದ್ದು ಕೆಲಸಗಳನ್ನು ನಿರ್ವಹಿಸುತ್ತಿರುವುದರಿಂದ ಅವರಿಗೆ ಲಸಿಕೆ ಹಾಕಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಸಿಬ್ಬಂದಿಗಳು ಸರಕಾರದ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಂಸ್ಥೆ ಆಡಳಿತ ಕಛೇರಿಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಮಾಡಿದ್ದಕ್ಕೆ ಸಿಬ್ಬಂದಿಗಳು ಸಂತಸ ವ್ಶಕ್ತಪಡಿಸಿದ್ದು, ಈಗಾಗಲೇ ಒಟ್ಟು 1031 ಸಿಬ್ಬಂದಿಗಳು ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ನಾರಾಯಣಪ್ಪ ಹಿರೆಕುರುಬರ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅನುಪಮ ಅಗ್ರವಾಲ, ಅಪರ್ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಮಹೇಶ ನಾಗರಬೆಟ್ಟ, ವಿಜಯಪುರ ಜಿಲ್ಲಾಸ್ಪತ್ರೆಯ ಸಿಎಂಎ ಡಾ. ಲಕ್ಕಣ್ಣವರ, ಡಾ. ಗಲಗಲಿ, ಡಾ ಬಿರಾದಾರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌