ಹುಬ್ಬಳ್ಳಿ: ರಾಜ್ಯಾದ್ಯ ಲಾಕಡೌನ್ ನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಲಾಕಡೌನ್ ನ್ನು ಮತ್ತೆ 14 ದಿನ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಲಾಕಡೌನ್ ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ರಾಜ್ಯದಲ್ಲಿ ಮತ್ತೆ ಲಾಕಡೌನ್ ವಿಸ್ತರಣೆ ಮಾಡಿ ಸಿಎಂ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕಡೌನ್ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಕೊರೊನಾ ನಿಯಂತ್ರಣಕ್ಕಾಗಿ ಮತ್ತು ಸೋಂಕು ಹರಡುವ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಲಾಕಡೌನ್ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಬಸವರಾ ಬೊಮ್ಮಾಯಿ ತಿಳಿಸಿದರು.