ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಕೂಡಲೇ ಅಂಪೊಟೆರಿಸಿನ್ ಎಂಜೆಕ್ಷನ್ ಪೂರೈಸಿ- ಸರಕಾರಕ್ಕೆ ಮಾಜಿ ಸಚಿವ ಎಂ. ಬಿ. ಪಾಟೀಲ ಮನವಿ
ವಿಜಯಪುರ: ಕಳೆದ ಎರಡು ತಿಂಗಳಿಂದ ಹೆಚ್ಚಳವಾಗಿದ್ದ ಕೊರೊನಾ ರೋಗಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಪ್ಯಾಕ್ ಫಂಗಸ್ ಕಾಯಿಲೆಯಿಂದ ಬಳಲುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಇದು ಆತಂಕಕಾರಿ ವಿಷಯವಾಗಿದ್ದು, ಈ ರೋಗದ ಚಿಕಿತ್ಸೆಗೆ ಅಗತ್ಯವಿರುವ ಆಂಪೊಟೆರಿಸಿನ್ ಎಂಜೆಕ್ಷನ್ ನ್ನು ಸರಕಾರ ಕೂಡಲೇ ಪೂರೈಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಮತ್ತು ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಿ […]
ಕೊರೊನಾ ಲಸಿಕೆ: ಈಗ ಲಸಿಕೆ ಪಡೆಯಲು ಯಾರೆಲ್ಲ ಅರ್ಹರು- ವಿಜಯಪುರ ಡಿಸಿ ನೀಡಿದ ಸೂಚನೆ ಏನು ಗೊತ್ತಾ?
ವಿಜಯಪುರ: ಕೊರೊನಾ ಲಸಿಕೆ ನೀಡುವ ಕುರಿತಂತೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಕ ಮಾಡಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯುವ ಕುರಿತಂತೆ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆರ್ ಸಿ ಎಚ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ಅಭಿಯಾನದಡಿ ನಾನಾ ಹಂತಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ, […]
ಗ್ರಾಮ ಮಟ್ಟದಲ್ಲಿ ಕೊರೊನಾ ನಿಯಂತ್ರಣಕ್ಕೆ ಮೈಕ್ರೋ ಕಂಟೇನ್ಮೆಂಟ್ ಝೋನ್ ನಿರ್ಮಾಣ- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೊರೊನಾ ನಿಯಂತ್ರಣ ವಿಚಾರದಲ್ಲಿ ಈವರೆಗೆ ನಗರ ಕಡೆಗೆ ಗಮನ ಹರಿಸಿದ್ದ ರಾಜ್ಯ ಸರಕಾರ ಈಗ ಗ್ರಾಮೀಣ ಭಾಗದತ್ತ ದೃಷ್ಠಿ ನೆಟ್ಟಿದೆ. ಕೊರೊನಾ ಸೋಂಕು ಹೆಚ್ಚಾಗಿರುವ ಗ್ರಾಮಾಂತರ ಪ್ರದೇಶದಲ್ಲಿ ಮೈಕ್ರೋ ಕಂಟೇನ್ಮೆಂಟ್ ವಲಯ ನಿರ್ಮಾಣ ಮಾಡುವ ಮೂಲಕ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರಕಾರ ತನ್ನ ಸಂಪೂರ್ಣ ಗಮನವನ್ನು ಗ್ರಾಮೀಣ ಭಾಗಕ್ಕೆ ಮೀಸಲಿಡಲು ನಿರ್ಧರಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೈಕ್ರೋ […]
ರೈತರು ಕೃಷಿ ಉತ್ಪನ್ನಗಳನ್ನು ಸಾಗಿಸಲು ನಿರ್ಬಂಧವಿಲ್ಲ- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ರೈತರು ತಮ್ಮ ಕೃಷಿ ಬೆಳೆಗಳ ಮಾರಾಟ ಮತ್ತು ಸರಬರಾಜಿಗೆ ಯಾವುದೇ ನಿರ್ಬಂಧವಿಲ್ಲ. ರೈತರು ತರುವ ತರಕಾರಿ,ಹಣ್ಣು, ಕೃಷಿ ಬೆಳೆಗಳನ್ನು ವರ್ತಕರಿಂದ ವ್ಯಾಪಾರಸ್ಥರಿಗೆ ಮಾರಾಟ ಮಾಡಲು ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೃಷಿ, ತೋಟಗಾರಿಕೆ, ಎಪಿಎಂಸಿ ಇಲಾಖೆ ಅಧಿಕಾರಿಗಳು ಹಾಗೂ ತರಕಾರಿ, ಹಣ್ಣು, ಲಿಂಬೆ ಹಣ್ಣು ವರ್ತಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತರ ಪಾರಂಪರಿಕ ಕೃಷಿ ಬೆಳೆ ಸೇರಿದಂತೆ ಹಣ್ಣು, […]
ಬಸವ ನಾಡಿನಲ್ಲಿ ಉಚಿತವಾಗಿ ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟಿನ್ ಗಳು
ವಿಜಯಪುರ: ರಾಜ್ಯಾದ್ಯಂತ ಈಗ ಕೊರೊನಾ ಎರಡನೇ ಅಲೆಯದ್ದೆ ಕಾಟ. ಹೀಗಾಗಿ ಮೂರನೇ ಈ ಅಲೆಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಲಾಕಡೌನ್ ವಿಸ್ತರಿಸಿದ್ದು, ನಾನಾ ವರ್ಗಗಳಿಗೆ ಪ್ಯಾಕೇಜ್ ಕೂಡ ಘೋಷಣೆ ಮಾಡಿದೆ. ಈ ಲಾಕಡೌನ್ ಸಂದರ್ಭದಲ್ಲಿ ಬಡವರು ಮತ್ತು ನಿರ್ಗತಿಕರಾರೂ ಉಪವಾಸದಿಂದ ಇರಬಾರದು ಎಂಬ ಉದ್ದೇಶದಿಂದ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಉಪಹಾರ ಮತ್ತು ಊಟ ನೀಡಲಾಗುತ್ತಿದೆ. ಈ ಇಂದಿರಾ ಕ್ಯಾಂಟಿನ್ ಗಳು ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಈಗ ಬಡವರ ಪಾಲಿಗೆ ಹೊಟ್ಟೆ ತುಂಬಿಸುವ ತಾಣಗಳಾಗಿವೆ. […]