ಮೋರಟಗಿ, ದೇವಣಗಾಂವ ಚೆಕ್ ಪೋಸ್ಟ್ ಗಳಿಗೆ ವಿಜಯಪುರ ಡಿಸಿ, ಇಂಡಿ ಎಸಿ ದಿಢೀರ, ಭೇಟಿ, ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೋರಟಗಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಇಂಡಿ ಉಪವಿಭಾಗಾಧಿಕಾರಿ ರಾಹುಲ ಸಿಂಧೆ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚೆಕ್ ಪೋಸ್ಟ್ ದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ಅವರು, ಅಕ್ರಮವಾಗಿ ಮರಳು ತುಂಬಿದ ವಾಹನಗಳು ಚೆಕ್ ಪೋಸ್ಟ್ ಮೂಲಕ ದಾಟಿ ಹೋಗದಂತೆ ತಡೆಯಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿ‌ನೆ ನೀಡಿದರು. ನಂತರ ಬಗಲೂರ-ಘತ್ತರಗಿ ಸೇತುವೆಯನ್ನು ವೀಕ್ಷಿಸಿದ ಅವರು, ಅಲ್ಲಿಂದ ದೇವಣಗಾಂವ […]

ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಟ್ ಆದವರಿಗೆ ಆಹಾರ, ಔಷಧಿ ಕಿಟ್ ನೀಡಿ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಹೋಮ್ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರ ಕುಟುಂಬಗಳಿಗೆ ಆಹಾರ ಮತ್ತು ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿನ‌ ಆಯ್ದ ಕೆಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರ […]

ಬೇರೆ ರಾಜ್ಯಗಳಿಗೆ ಹಣ್ಣು-ತರಕಾರಿ ಸಾಗಾಣಿಕೆಗೆ ಹಸಿರು ಪಾಸ್ ವ್ಯವಸ್ಥೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಬೇರೆ ರಾಜ್ಯಗಳ ಮಾರುಕಟ್ಟೆಗಳಿಗೆ ರೈತರು ಬೆಳೆದ ಹಣ್ಣು ಮತ್ತು ತರಕಾರಿಗಳನ್ನು ತಲುಪಿಸಲು ಈಗಾಗಲೇ ತೋಟಗಾರಿಕೆ ಇಲಾಖೆಯಿಂದ ಹಸಿರು ಪಾಸ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಹಂತದಲ್ಲಿ ರೈತರು ಸರಕು ಸಾಗಾಟ ಮಾಡಲು ತೊಂದರೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಅವರು ತಿಳಿಸಿದ್ದಾರೆ. ಯಾವುದೇ ಸಮಯದಲ್ಲಿ ಹೊರ ಜಿಲ್ಲೆ ಅಥವಾ ರಾಜ್ಯದಲ್ಲಿ ತಾವು ಕಳುಹಿಸುವ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಸಂಬಂಧಿಸಿದಂತೆ ತೊಂದರೆಯಾದಲ್ಲಿ, ರೈತರು ಅಪರ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಅಗತ್ಯ ಸಹಾಯ ದೊರೆಯಲಿದೆ. ಲಾಕಡೌನ್, […]

ಸಾರ್ವಜನಿಕ ಸ್ವಾಸ್ಥ್ಯಕ್ಕಾಗಿ ನ್ಯಾಯಾಂಗ ಕಾರ್ಯಕರ್ತರ ಹೆಜ್ಜೆ- ಕೊರೊನಾ ನಿಯಂತ್ರಣಕ್ಕೆ ಹೆಲ್ತ್ ಕಿಟ್ ವಿತರಣೆಗೆ ಚಾಲನೆ

ಬೆಂಗಳೂರು: ಕೊರೊನಾ ಎರಡನೇ ಅಲೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಮತ್ತು ಜಾಗೃತಿ ಕಾರ್ಯಕ್ರಮದತ್ತ ನ್ಯಾಯಾಂಗ ಇಲಾಖೆ ಅರ್ಥಪೂರ್ಣ ಹೆಜ್ಜೆ ಇಟ್ಟಿದೆ. ಈ ಸಂಬಂಧ ನಮೋ ಸಮಾಜ್ ಸಂಸ್ಥೆಯ ಸಹಭಾಗಿತ್ವದಲ್ಲಿ ಕೈಗೊಂಡಿರುವ ಕಾರ್ಯಕ್ರಮ ಗಮನ ಸೆಳೆದಿದೆ. ನಾನಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಸುರಕ್ಷಾ ಸಾಮಾಗ್ರಿ, ರೋಗ ಪ್ರತಿರೋಧಕ ಔಷಧಿ ಹಾಗೂ ಆಮ್ಲಜನಕ ಪರೀಕ್ಷಾ ಉಪಕರಣಗಳನ್ನೊಳಗೊಂಡ ಹೆಲ್ತ್ ಕಿಟ್ ವಿತರಣೆ ಮಾಡಲಾಗಿದೆ. ಬೆಂಗಳೂರು ನಗರದ ಸಿಟಿ ಸಿವಿಲ್ ನ್ಯಾಯಾಲಯಗಳ ಕಟ್ಟಡ ಸಂಕೀರ್ಣ ಆವರಣದಲ್ಲಿ […]

ಅಮೇರಿಕ, ಇಸ್ರೆಲ್ ಮಾದರಿಯಲ್ಲಿ ದೇಶದ ಎಲ್ಲರಿಗೂ ಕೊರೊನಾ ಲಸಿಕೆ ಹಾಕಿಸಬೇಕು- ಪ್ರಧಾನಿ, ಸಿಎಂಗೆ ಎಂ. ಬಿ. ಪಾಟೀಲ ಒತ್ತಾಯ

ವಿಜಯಪುರ: ಅಮೇರಿಕ ಯುರೋಪ್ ರಾಷ್ಟ್ರಗಳು ಮತ್ತು ಇಸ್ರೆಲ್ ಈಗಾಗಲೇ ಕೊರೊನಾ ಲಸಿಕೆ ಕಾರ್ಯಕ್ರಮವ ನ್ನು ಮುಗಿಸಿವೆ. ಅಲ್ಲಿನ ಜನ ಕೊರೊನಾ ಮುಕ್ತರಾಗಿದ್ದಾರೆ. ಅಲ್ಲಿನ ಜನ-ಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ಆ ದೇಶಗಳ ಮಾದರಿಯಲ್ಲಿ ಭಾರತದಲ್ಲಿಯೂ ಪ್ರಧಾನಿ ಮತ್ತು ರಾಜ್ಯದಲ್ಲಿ ಸಿಎಂ ಎಲ್ಲ ವಿಷಯಗಳನ್ನು ಬದಿಗಿಟ್ಟು ಕೂಡಲೇ ಎಲ್ಲ ಜನರಿಗೂ ಕೊರೊನಾ ಲಸಿಕೆ ಹಾಕಬೇಕು ಎಂದು ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಈ ಕುರಿತು […]

ಶಿಕ್ಷಣ ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ ಸದಸ್ಯರಿಂದ ಸಿಎಂ ಭೇಟಿ- ಅನುದಾನ ರಹಿತ ಶಾಲೆ-ಕಾಲೇಜುಗಳ ಸಿಬ್ಬಂದಿಗೆ ಪ್ಯಾಕೇಜ್ ನೀಡುವಂತೆ ಆಗ್ರಹ

ವಿಜಯಪುರ: ಅನುದಾನ ರಹಿತ ಶಾಲೆ ಮತ್ತು ಕಾಲೇಜುಗಳ ಸಿಬ್ಬಂದಿಗೂ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ವಿಧಾನ ಪರಿಷತ ಸದಸ್ಯರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು. ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿದ ಈ ಸಭೆಯಲ್ಲಿ ವಿಧಾನ ಪರಿಷತ ಸದಸ್ಯ ಅರುಣ ಶಹಾಪೂರ, ಪುಟ್ಟಣ್ಣ, ಶಶೀಲ ನಮೋಶಿ, ಹಣಮಂತ ನಿರಾಣಿ, ಎಸ್. ವಿ. ಸಂಕನೂರ, ವೈ. ಎ. ನಾರಾಯಣಸ್ವಾಮಿ, ಚಿದಾನಂದಗೌಡ ಅವರು […]

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಲ್ಲಾ ಊಹಾಪೋಹ- ಮೇಕೆದಾಟು ವಿವಾದ ನಾಳೆ ತಜ್ಞರೊಂದಿಗೆ ಸಭೆ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬುದೆಲ್ಲ ಊಹಾಪೋಹಗಳು. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾವ ಸುದ್ದಿಯೂ ಅಧಿಕೃತ ಅಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಟೌನ್ ಹಾಲ್ ಬಳಿ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು‌. ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಯಾವ ಸುದ್ದಿ ಯೂ ಅಧಿಕೃತ ಅಲ್ಲ, ಎಲ್ಲ ಊಹಾಪೋಹಗಳು. ಊಹಾಪೋಹಗಳಿಗೆ ಉತ್ತರ ಕೊಡಲಾಗುವುದಿಲ್ಲ. ಉತ್ತರ […]