ಮೇಕೆದಾಟು ಯೋಜನೆ ವಿವಾದ: ಕಾನೂನು ಹೋರಾಟಕ್ಕೆ ಮುಂದಾದ ಸರಕಾರ – ಕಾನೂನು ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮಿತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠದ ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಅಡ್ವಕೇಟ್ ಜನರಲ್ […]

ಆಶಾ, ಅಂಗನವಾಡಿ ಕಾರ್ಯಕರ್ತರ ಸೇವೆಗೆ ಮೆಚ್ಚುಗೆ- ಜಿ. ಪಂ. ನಿಂದ ನಾಳೆಯಿಂದ ಆಹಾರದ ಕಿಟ್, ಸೀರೆ ನೀಡಲು ನಿರ್ಧಾರ- ಜಿ. ಪಂ. ಸಿಇಓ ಗೋವಿಂದರೆಡ್ಡಿ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಕಳೆದ ಸುಮಾರು ಒಂದು ವಾರಕ್ಕೂ ಹೆಚ್ಚು ಕಾಲ ಗ್ರಾಮೀಣ ಪ್ರದೇಶದಲ್ಲಿ ನಡೆಸಿದ ಕೊರೊನಾ ಸೋಂಕಿತರ ಮನೆ-ಮನೆ ಸಮೀಕ್ಷೆ ಈಗ ಮುಕ್ತಾಯವಾಗಿದೆ. ಈ ಕಾರ್ಯದಲ್ಲಿ ಗ್ರಾಮೀಣ ಭಾಗದ 1785 ಆಶಾ ಮತ್ತು 1733 ಅಂಗನವಾಡಿ ಕಾರ್ಯಕರ್ತರು ಕೆಲಸ ನಿರ್ವಹಿಸಿದ್ದಾರೆ. ಇವರ ಈ ಕಾರ್ಯವನ್ನು ವಿಜಯಪುರ ಜಿಲ್ಲಾಡಳಿತ ಮೆಚ್ಚಿಕೊಂಡಿದ್ದು, ಶಹಬ್ಬಾಶ್ ಎಂದಿದೆ. ಈ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯಪಡೆಗಳ ಜೊತೆ ಸೇರಿ ವಿಜಯಪುರ ಜಿಲ್ಲೆಯ 629 ಗ್ರಾಮಗಳ […]

ವಿಜಯಪುರ ಜಿಲ್ಲಾಡಳಿತದ ಮನೆ-ಮನೆ ಸಮೀಕ್ಷೆಗೆ ಶಾಸಕ ಎಂ. ಬಿ. ಪಾಟೀಲ ಶ್ಲಾಘನೆ, ಕೊರೊನಾ ಮುಗಿಯುವವರೆಗೂ ಮುಂದುವರೆಸಲು ಸಲಹೆ

ವಿಜಯಪುರ: ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮನೆ-ಮನೆ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡಿ, ಕೊರೊನಾ ಸೋಂಕಿತರ ಪತ್ತೆಗೆ ಕೈಗೊಂಡ ಕ್ರಮವನ್ನು ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಶ್ಲಾಘಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅವರು ಮನೆ-ಮನೆ ಸಮೀಕ್ಷೆ ಮಾಡಿ, ಅಗತ್ಯವಿದ್ದರಿಗೆ ಹೆಲ್ತ್ ಕಿಟ್ ನೀಡಿ, ಹೋಬಳಿವಾರು ಕೊವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಿ ಮತ್ತು ನಿರಂತರ ಜಾಗೃತಿ ಮೂಡಿಸಲು ಕರಪತ್ರಗಳನ್ನು ನೀಡಿರುವ ವಿಜಯಪುರ ಜಿಲ್ಲಾಡಳಿತದ ಕ್ರಮ ಶ್ಲಾಘಿಸುತ್ತೇನೆ. ಇದಕ್ಕಾಗಿ ಮುತುವರ್ಜಿ ವಹಿಸಿದ ಜಿಲ್ಲಾಧಿಕಾರಿ […]

ಸಿಎಂ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಸಚಿವರು, ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹ

ವಿಜಯಪುರ: ಸಿಎಂ ಬದಲಾವಣೆ ಕುರಿತು ಷಡ್ಯಂತ್ರ ನಡೆಸುತ್ತಿರುವ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಮತ್ತು ಇದರಲ್ಲಿ ಶಾಮೀಲಾಗಿರವ ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಮತ್ತು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಗಾಳಿ ಸುದ್ದಿ. ಮುಂದಿನ ಸಾರ್ವತ್ರಿಕ ಚುನಾವಣೆಯವರೆಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇದರಲ್ಲಿ ಯಾವುದೇ […]

ಕೊರೊನಾ ನಿಯಂತ್ರಣಕ್ಕೆ ಸಿಂದಗಿ, ಆಲಮೇಲ ತಾಲೂಕುಗಳಿಗೆ ತಲಾ ರೂ. 1 ಕೋ. ಅನುದಾನ ನೀಡಿ- ಅರುಣ ಶಹಾಪುರ ಪತ್ರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರಕ್ಕೆ ಸಧ್ಯಕ್ಕೆ ಶಾಸಕರಿಲ್ಲ. ಹೀಗಾಗಿ ಸಿಂದಗಿ ಮತ್ತು ಆಲಮೇಲ ತಾಲೂಕಿನಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸರಕಾರ ಕೂಡಲೇ ರೂ. 1 ಕೋ. ಅನುದಾನ ಬಿಡುಗಡೆ ಮಾಡುವಂತೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸಿಎಂ ಮತ್ತು ಆರೋಗ್ಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ದಿ. ಎಂ. ಸಿ. ಮನಗೂಳಿ ಅವರ ನಿಧನದಿಂದ ಸಿಂದಗಿ ಮತಕ್ಷೇತ್ರದಲ್ಲಿ ಶಾಸಕ ಸ್ಥಾನ ತೆರವಾಗಿದೆ. ರಾಜ್ಯ ಸರಕಾರ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಶಾಸಕರ ಅನುದಾನವನ್ನು ಕೋವಿಡ್-19 […]