ಆಯುಷ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ- ಕೊರೊನಾ ರೋಗಿಗಳ ಗುಣಪಡಿಸುವಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದ ಡಿಸಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೈಗೊಂಡ ಅನೇಕ ರೀತಿಯ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಕೊರೊನಾ ರೋಗಿಗಳ ಗುಣಮುಖ ಪ್ರಮಾಣದಲ್ಲಿ ಜಿಲ್ಲಡ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಎಲ್ಲರ ಸಹಕಾರದಿಂದ ಕೊರಪನಾ ಸಾವಿನ ಪ್ರಮಾಣ ಸಹ ತಗ್ಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ವಿಜಯಪುರ ನಗರದ ಆಯುಷ್ ಆಸ್ಪತ್ರೆಗೆ ತಜ್ಞ ವೈದ್ಯರ ತಂಡದೊಂದಿಗೆ ಕೊರೊನಾ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿದ ಅವರು, ನಿರಂತರ ಮತ್ತು ಹಗಲಿರುಳು ಶ್ರಮವಹಿಸಿ ಎಲ್ಲರ ಸಹಕಾರದಿಂದ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ […]

ಹಾಪಕಾಮ್ಸ ವಾಹನಗಳ ಮೂಲಕ ಮನೆ ಮನೆಗೆ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ವಿಜಯಪುರ: ಮನೆ ಮನೆಗೆ ಹಣ್ಣು ಮತ್ತು ತರಕಾರಿ ಮಾರಾಟ ಮಾಡುವ ಹಾಪಕಾಮ್ಸ್ ವಾಹನಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಚಾಲನೆ ನೀಡಿದರು. ವಿಜಯಪುರ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ,(ಜಿಲ್ಲಾ ಪಂಚಾಯಿತಿ) ಮತ್ತು ಜಿಲ್ಲಾ ಹಾಪಕಾಮ್ಸ್ ಸಹಯೋಗದಲ್ಲಿ ಸಂಚಾರಿ ಸರಕು ವಾಹನದ ಮೂಲಕ ಹಣ್ಣು ಮತ್ತು ತರಕಾರಿಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಇದಾಗಿದೆ‌. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ಸರಕಾರ ಜನತಾ ಕರ್ಫ್ಯೂ, ಲಾಕಡೌನ್ ಜಾರಿ ಮಾಡಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲದ ಹಿತದೃಷ್ಟಿಯಿಂದ ಹಾಪಕಾಮ್ಸ್ […]

ಶಾಸಕ ದೇವಾನಂದ ಚವ್ಹಾಣ ಅವರಿಂದ ನಾಗಠಾಣ ಮತಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಎಫ್. ಚವ್ಹಾಣ ತಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಪಡಿತರ ಕಿಟ್ ವಿತರಣೆ ಮುಂದುವರೆಸಿದ್ದಾರೆ. ಈಗಾಗಲೇ ವಿಜಯಪುರ ತಾಲೂಕು ವ್ಯಾಪ್ತಿಯಲ್ಲಿ ಆಹಾರದ ಧಾನ್ಯಗಳ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿರುವ ಅವರು ಈಗ ಚಡಚಣ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಚಡಚಣ ತಾಲೂಕಿನ ನಾನಾ ಗ್ರಾಮ ಪಂಚಾಯಿಗಳಿಗೆ ತೆರಳಿದ ಅವರು, ಕೊರೊನಾ ವಾರೊಯರ್ಸ್ ಗಳಾದ ಗ್ರಾಮ ಪಂಚಾಯಿತಿ, ಆರೋಗ್ಯ, ಪೊಲೀಸ್, ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಆಹಾರ […]

ಘೋಷಣೆಯಾದ ವಿಶೇಷ ಪ್ಯಾಕೇಜ್ ಹಣ ಬಿಡುಗಡೆ- ತುಮಕೂರು ಡಿಸಿ, ಸಿಇಓ, ಎಸ್ಪಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ- ಸಿಎಂ

ತುಮಕೂರು: ಲಾಕಡೌನ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನಾನಾ ವಲಯಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಪ್ಯಾಕೇಜ್ ನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಅದಕ್ಕೆ ಅಗತ್ಯವಾದ ಹಣ ಬಿಡುಗಡೆ ಮಾಡುತ್ತೇವೆ. ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತಮಾಡಿದ ಅವರು, ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತಡೆಯಲು ಸಕಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ತುಮಕೂರು […]

ವಿಜಯಪುರ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸುವ ರೂ. 2385.51 ಜಲಧಾರೆ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ವಿಜಯಪುರ: :ವಿಜಯಪುರ ಜಿಲ್ಲೆಯ 12 ನಗರ ಪ್ರದೇಶಗಳು ಮತ್ತು ಗ್ರಾಮೀಣ ಭಾಗದ 1035 ಜನವಸತಿಗಳಿಗೆ ನೀರನ್ನು ಒದಗಿಸಲು ಅಂದಾಜು ರೂ. 2385.51 ಕೋ. ವೆಚ್ಚದ ಮಹತ್ವಾಕಾಂಕ್ಷಿ ಜಲಧಾರೆ ಯೋಜನೆ ಯನ್ನು ಜಲ್ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ಕುಡಿಯುವ ನೀರಿನ ಯೋಜನೆ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ […]