ಶಾಸಕ ದೇವಾನಂದ ಚವ್ಹಾಣ ಅವರಿಂದ ನಾಗಠಾಣ ಮತಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಎಫ್. ಚವ್ಹಾಣ ತಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಪಡಿತರ ಕಿಟ್ ವಿತರಣೆ ಮುಂದುವರೆಸಿದ್ದಾರೆ.

ಈಗಾಗಲೇ ವಿಜಯಪುರ ತಾಲೂಕು ವ್ಯಾಪ್ತಿಯಲ್ಲಿ ಆಹಾರದ ಧಾನ್ಯಗಳ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿರುವ ಅವರು ಈಗ ಚಡಚಣ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಚಡಚಣ ತಾಲೂಕಿನ ನಾನಾ ಗ್ರಾಮ ಪಂಚಾಯಿಗಳಿಗೆ ತೆರಳಿದ ಅವರು, ಕೊರೊನಾ ವಾರೊಯರ್ಸ್ ಗಳಾದ ಗ್ರಾಮ ಪಂಚಾಯಿತಿ, ಆರೋಗ್ಯ, ಪೊಲೀಸ್, ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಆಹಾರ ಧಾನ್ಯದ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ, ತಾಲ್ಲೂಕು ಪಂಚಾಯಿತಿ ಸಹಾಯಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಆರೋಗ್ಯಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು. ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌