ರಾಜ್ಯ, ಕೇಂದ್ರ ಸರಕಾರಗಳ ವಿರುದ್ಧ ಎಂ. ಬಿ. ಪಾಟೀಲ ಆಕ್ರೋಶ- ಯಾಕೆ ಗೊತ್ತಾ?
ವಿಜಯಪುರ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಲಸಿಕೆ ಪೂರೈಕೆ ಮತ್ತು ಔಷಧಿ ಸರಬರಾಜು ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣವಾಗಿ ಎಡವಿವೆ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಜೀವನವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಮನೆಗಳು ಮುರಿದಿವೆ. ಲಕ್ಷಾಂತರ ಜನ ಅನಾಥರಾಗಿದ್ದಾರೆ. ಆದರೂ ನಾವು ವಿರೋಧ ಪಕ್ಷದವರಾಗಿ, ಖಾಸಗಿಯವರಾಗಿ ಸಹಕಾರ ಮಾಡಬೇಕಿದೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. […]
ಕೊರೊನಾ ಸಂಕಷ್ಚ ಕಾಲದಲ್ಲಿ ಸಿಎಂ ಬದಲಾವಣೆ ವಿಚಾರ ಸರಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ
ವಿಜಯಪುರ: ಕೊರೊನಾ ಸಂಕಷ್ಟ ಕಾಲದಲ್ಲಿ ಸಿಎಂ ಬದಲಾವಣೆ ವಿಚಾರ ಸರಿಯಲ್ಲ. ಈ ವಿಷಯದಲ್ಲಿ ತಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಿರುರುವುದಾಗಿ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸಿಎಂ ಜೊತೆ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು, ನಾನು ಪಕ್ಷದ ಹೈ ಕಮಾಂಡ ನಿರ್ಣಯಕ್ಕೆ ನಾನು ಬದ್ದನಾಗಿದ್ದೇನೆ. ನಾನು ಯಾವುದೇ ವ್ಯಕ್ತಿಯ ನಿಲುವಿಗಿಂತ ಪಕ್ಷದ ನಿರ್ಣಯಕ್ಕೆ ನಾನು ಬದ್ದನಾಗಿದ್ದೇನೆ. ಕೊರೊನಾ ಸಂದರ್ಭದಲ್ಲಿ ಸರಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇಂಥ ಇಂತಹ ಸಂದರ್ಭದಲ್ಲಿ […]
ಲಾಕಡೌನ್ ವಿಸ್ತರಣೆ ಕುರಿತು ಸಚಿವರ ಸಭೆಯಲ್ಲಿ ಸಿಎಂ ನಿರ್ಧರಿಸುತ್ತಾರೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಧ್ಯಕ್ಕೆ ಜೂ.7ರ ವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕಡೌನ್ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು. ಸದ್ಯಕ್ಕೆ ಜೂ.7ರ ವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ […]
ಸಿಎಂ ವಿಡಿಯೋ ಸಂವಾದದಲ್ಲಿ ವ್ಯಾಕ್ಸಿನೇಷನ್ ಟ್ರಯಲ್ ಬಗ್ಗೆ ಗೊತ್ತಿರದ ಮೂರ್ಖರೊಬ್ಬರು ಕಾಂಗ್ರೆಸ್ ವಿರುದ್ಧ ಆರೋಪಿಸಿದರು- ಶಾಸಕ ಎಂ. ಬಿ. ಪಾಟೀಲ ಗರಂ
ವಿಜಯಪುರ: ಕೊರೊನಾ ನಿಯಂತ್ರಣ ಕುರಿತು ಚರ್ಚಿಸಲು ಸಿಎಂ ಬಿ. ಎಸ್. ಯಡಿಯೂರಪ್ಪ ನಡೆಸಿದ ಐದು ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಕಲಬುರಗಿ ಜಿಲ್ಲೆ ಬಿಜೆಪಿ ಶಾಸಕರೊಬ್ಬರು ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮಾತನಾಡುವಾಗ ವ್ಯಾಕ್ಸಿನೇಶನ್ ತಡವಾಗಲು ಕಾಂಗ್ರೆಸ್ಸಿಗರೆ ಕಾರಣ ಎಂದು ಆರೋಪಿಸಿದ್ದರು. ಈ ಸಂದರ್ಭದಲ್ಲಿ ಮಾತಿನ ಸಮರ ನಡೆದಿತ್ತು. ವಿಡಿಯೋ ಸಂವಾದದ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ, […]
ಬಂಜಾರಾ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ನೀಡಿ, ವಿಜಯಪುರ ಜಿಲ್ಲೆಗೆ ಸೂಕ್ತ ಔಷಧಿ ಒದಗಿಸಲು ಎಂ ಎಲ್ ಸಿ ಪ್ರಕಾಶ ರಾಠೋಡ ಆಗ್ರಹ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ವಿನ ಪ್ರಮಾಣದಲ್ಲಿ ಹರಡಿದ್ದು, ಲಂಬಾಣಿ ತಾಂಡಾದ ಜನರು ಬೇರೆ ಬೇರೆ ಕಡೆ ದುಡಿಯಲು ಹೊಗಿದ್ದವರು ಲಾಕಡೌನ್ ಹಿನ್ನೆಲೆಯಲ್ಲಿ ಮನೆಯಲ್ಲಿ ಇದ್ದಾರೆ. ಇವರುಗೆ ಮತ್ತು ಲಂಬಾಣಿಗಳಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೂ ಹೆಚ್ಷಿನ ಪ್ರಮಾಣದಲ್ಲಿ ಸೋಂಕು ಕಂಡು ಬರುತ್ತಿದೆ. ಅದನ್ನು […]
ಸಿಎಂ ಜೊತೆ ವಿಡಿಯೋ ಸಂವಾದ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿ ಮಧ್ಯೆ ಮಾತಿನ ಸಮರ
ವಿಜಯಪುರ: ಕೊರೊನಾ ಎರಡನೇ ಅಲೆ ತಡೆಗಟ್ಟುವ ಕುರಿತು ಸಿಎಂ ಐದು ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಸಿಎಂ ನಡೆಸಿದ ವಿಡಿಯೋ ಸಂವಾದ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ವಿಡಿಯೋ ಸಂವಾದದಲ್ಲಿ ವಿಜಯಪುರದಲ್ಲಿ ಪಾಲ್ಗೊಂಡ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಸರಕಾರ ಅಗತ್ಯಕ್ಕೆ ತಕ್ಕಂತೆ ಔಷಧಿ, ಲಸಿಕೆ ಪೂರೈಸಬೇಕು ಎಂದು ಆಗ್ರಹಿಸಿ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಲು ಪ್ರಯತ್ನಿಸಿದರು. ಆಗ ಕಲಬುರಗಿಯಿಂದ ಪಾಲ್ಗೊಂಡಿದ್ದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ […]