ವಿಜಯಪುರ: ಕೇಂದ್ರ ಸರಕಾರ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ. ಭಾರತ ಸರಕಾರ ಈ ಬಾರಿ ಸಿ ಬಿ ಎಸ್ ಇ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸಲು ನಿರ್ಧರಿಸಿದೆ. ಪರೀಕ್ಷೆ ಕುರಿತು ಸಾಕಷ್ಟು ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಠಿಯಿಂದ ಕೈಗೊಳ್ಳಲಾದ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.