ಜಿಲ್ಲಾಸ್ಪತ್ರೆಗೆ ತೆರಳಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸಾಕಷ್ಟು ಯಶಸ್ಸು ಸಾಧಿಸಿರುವ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಈಗ ಮೂರನೇ ಅಲೆ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿ. ಪ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಜೊತೆ ವಿಜಯಪುರ ಜಿಲ್ಲಾಸ್ಪತ್ರಗೆ ಭೇಟಿ ನೀಡಿದ ಅವರು, ಕೊರೊನಾ ಮೂರನೇ ಅಲೆಯನ್ನು ತಡೆಯಲು ಪೂರ್ವ ಸಿದ್ಧತೆಗಳ ಬಗ್ಗೆ ಸದೀರ್ಘ ಸಭೆ ನಡೆಸಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ […]
ರೈತರಿಗೆ ಉಚಿತವಾಗಿ ಬಿತ್ತನೆ ಬೀಜ, ಗೊಬ್ಬರ ನೀಡಿ ಸಾಲ ಮನ್ನಾ ಮಾಡಲು ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ ಆಗ್ರಹ
ವಿಜಯಪುರ: ಅನ್ನದಾತರು ಕೊರೊನಾದಿಂದಾಗಿ ಸಂಕಷ್ಟದಲ್ಲಿದ್ದು, ಕೂಡಲೇ ಸರಕಾರ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಮತ್ತು ಗೊಬ್ಬರ ಒದಗಿಸಬೇಕು ಮತ್ತು ಅವರ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ರಾಜ್ಯ ಸರಕಾರ ರೈತರಿಗೆ ಯಾವುದೇ ಪ್ಯಾಕೇಜ್ ನ್ನು ಘೋಷಣೆ ಮಾಡಲಿಲ್ಲ. ಅವರ ಸಾಲ ಮನ್ನಾ ಮಾಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು […]
ಮಹಾರಾಷ್ಟ್ರ, ರಾಜ್ಯದ ಗಡಿ ಭಾಗದಲ್ಲಿ ಮಳೆ ಬಸವ ನಾಡಿನಲ್ಲಿ ತುಂಬಿ ಹರಿಯುತ್ತಿರುವ ಡೋಣಿ ನದಿ
ವಿಜಯಪುರ: ಮಹಾರಾಷ್ಟ್ರ ಮತ್ತು ವಿಜಯಪುರ ಜಿಲ್ಲೆಯಾದ್ಯಂತ ಅಲ್ಲಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಧ ಅಲ್ಲಲ್ಲಿ ಉತ್ತಮ ಮಳೆಯಿಂದಾಗಿ ಡೋಣಿ ನದಿ ತುಂಬಿ ಹರಿಯುತ್ತಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವ ಕಾರಣ ಹಲವಾರು ಕಡೆಗಳಲ್ಲಿ ರೈತರ ಹೊಲಗಳಿಗೆ ನೀರು ನುಗಿದೆ. ನಿನ್ನೆ ಸಂಜೆಯಿಂದ ಆರಂಭವಾದ ಮಳೆ ಬೆಳಿಗ್ಗೆವರೆಗೂ ಸುರಿದಿದೆ. ಈ ಮಳೆಯ ನೀರು ಡೋಣಿ ನದಿಯ ಮೂಲಕ ರೈತರ ಹೊಲಗಳಿಗೆ ನುಗ್ಗಿದೆ. ಈ ವರ್ಷದ ಮೊದಲ ಮುಂಗಾರು ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ಬಬಲೇಶ್ವರ ತಾಲೂಕಿನ ಸಾರವಾಡ […]