ರೈತರಿಗೆ ಉಚಿತವಾಗಿ ಬಿತ್ತನೆ ಬೀಜ, ಗೊಬ್ಬರ ನೀಡಿ ಸಾಲ ಮನ್ನಾ ಮಾಡಲು ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ ಆಗ್ರಹ

ವಿಜಯಪುರ: ಅನ್ನದಾತರು ಕೊರೊನಾದಿಂದಾಗಿ ಸಂಕಷ್ಟದಲ್ಲಿದ್ದು, ಕೂಡಲೇ ಸರಕಾರ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಮತ್ತು ಗೊಬ್ಬರ ಒದಗಿಸಬೇಕು ಮತ್ತು ಅವರ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ರಾಜ್ಯ ಸರಕಾರ ರೈತರಿಗೆ ಯಾವುದೇ ಪ್ಯಾಕೇಜ್ ನ್ನು ಘೋಷಣೆ ಮಾಡಲಿಲ್ಲ. ಅವರ ಸಾಲ ಮನ್ನಾ ಮಾಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷಗಳ ಕಾಲ ಸಿಎಂ ಆಗಿ ಒಂದೇ ಪೈಸೆ ಅನ್ನದಾತರಿಗೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು.

ನೂತನ ತಾಲೂಕು ಕೇಂದ್ರಗಳಲ್ಲಿ ಸಾಂವಿಧಾನ ಸಂಸ್ಥೆಗಳನ್ನು ಆರಂಭಿಸಲಿ

ಇದೇ ವೇಳೆ, ನೂತನ ತಾಲೂಕುಗಳು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ತಾಲೂಕು ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾಗಿವೆ. ಹೊಸ ತಾಲೂಕುಗಳಿಗೆ ಬೇಕಾಗಿರುವ ಎಲ್ಲ ಸಂವಿಧಾನಕ ಸಂಸ್ಥೆಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸರಕಾರಕ್ಕೆ ಈ ಸರಕಾರಕ್ಕೆ ಕಿವಿ ಕೇಳಿಸುತ್ತಿಲ್ಲ. ಕಣ್ಣು ಕಾಣಿಸುತ್ತಿಲ್ಲ. ಎಷ್ಟೇ ಹೇಳಿದರೂ ಕೆಲಸ ಆಗುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲ, ಅಭಿವೃದ್ಧಿಯಲ್ಲಿಯೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಪ್ರಕಾಶ ರಾಠೋಡ ಆರೋಪಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಎಲ್ಲ ಕಡೆ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಕೆಎಸ್ಆರ್ ಮಾದರಿಯಲ್ಲಿ ಇಲ್ಲಿ ಉದ್ಯಾನ ವನ ನಿರ್ಮಿಸಬೇಕು. ಬೋಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ ಪ್ರಕಾಶ ರಾಠೋಡ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಅದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

Leave a Reply

ಹೊಸ ಪೋಸ್ಟ್‌