ಜಿಲ್ಲಾವಾರು ಕೊರೊನಾ ಕೋವಿಡ್ ವಸ್ತುಸ್ಥಿತಿ ಆಧರಿಸಿ ಲಾಕಡೌನ್ ಸಡಿಲಿಕೆ ಬಗ್ಗೆ ಸಿಎಂ ನಿರ್ಧರಿಸುತ್ತಾರೆ- ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲಾ ಮಟ್ಟದಲ್ಲಿ ಕೊರೊನಾ ಸೋಂಕಿನ ವಸ್ತುಸ್ಥಿತಿಯನ್ನು ಆದರಿಸಿ ಜೂ. 14ರ ನಂತರ ಯಾವ ರೀತಿ ಲಾಕಡೌನ್ ಸಡಿಲಿಕೆ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಹಿರಿಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಮಹತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಲಾಕಡೌನ್ ಸಡಿಲಿಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಲಹೆ-ಸೂಚನೆಗಳು ಬರುತ್ತಿವೆ ಎಂದು […]

ಸಂಭವನೀಯ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಕೈಗೊಳ್ಳಲು ವಿಜಯಪುರ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ವರ್ಷದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಮುಂದಿನ ದಿನಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಗಳನ್ನು ನಿರ್ವಹಿಸಲು ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಬೇಕು. ಕೃಷ್ಣ ಮತ್ತು ಭೀಮಾ ಹಾಗೂ ದೋಣಿ ನದಿಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ […]