ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ

ವಿಜಯಪುರ: ರಾಜ್ಯ ಸರಕಾರ ಅಸಂಘಟಿತ ಕಾರ್ಮಿಕರಾದ ಆಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲ‌ರಗಳು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಚಮ್ಮಾರರುಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ ಒಟ್ಟು 12 ವರ್ಗಗಳಿಗೆ ತಲಾ ರೂ.2000 ಗಳಂತೆ ಮತ್ತು ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ.3000 ಸಹಾಯ ಧನವನ್ನು ಘೋಷಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ಕರ್ನಾಟಕ ಸರಕಾರದ ಸೇವಾ ಸಿಂಧು ತಂತ್ರಾಂಶದಲ್ಲಿhttps://sevasindhu.karnataka.gov.in ಸಿಟಿಜನ್ ಲಾಗಿನ್ ಆಗಿ ಅಗತ್ಯ ದಾಖಲೆಗಳೊಂದಿಗೆ […]

ಬಿಜೆಪಿ ಮುಖಂಡರು ಅಧಿಕಾರ ದಾಹ ಬಿಟ್ಟು ಕೊರೊನಾ, ಬೆಲೆ ಏರಿಕೆ ನಿಯಂತ್ರಿಸಲಿ- ಶಾಸಕ ಎಂ. ಬಿ. ಪಾಟೀಲ ವಾಗ್ದಾಳಿ

ಹಾವೇರಿ: ಕೊರೊನಾ ಸಂಕಷ್ಟ ಸಮಯದಲ್ಲಿ ಕೊರೊನಾ ನಿರ್ವಹಣೆ ಬಿಟ್ಟು ಬಿಜೆಪಿ ನಾಯಕರು ಅಧಿಕಾರ ದಾಹ ಪ್ರದರ್ಶಿಸುತ್ತಿದ್ದಾರೆ ಎಂದು ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಮಾಡಿದ ಅವರು, ರಾಜ್ಯ ಸರಕಾರದಲ್ಲಿ ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ‌. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸುವ ಕೆಲಸ ಮಾಡಬೇಕು. ಅಧಿಕಾರ ಖುರ್ಚಿ ಗಿರ್ಚಿ ನಂತರ ಎಂದು ಅವರು ಹೇಳಿದರು. ಕೊರೊನಾದಿಂದಾಗಿ […]

ಕೊರೊನಾ, ಲಾಕಡೌನ್ ಸಮಯದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ 50 ದಿನಗಳಲ್ಲಿ 50 ಸಾವಿರ ಜನರಿಗೆ ಆಹಾರ ವಿತರಣೆ

ವಿಜಯಪುರ: ಕೊರೊನಾ ಮತ್ತು ಲಾಕಡೌನ ಸಂದರ್ಭದಲ್ಲಿ ಸತತ 50 ದಿನ 50 ಸಾವಿರ ಹಸಿದ ಹೊಟ್ಟೆಗಳ ಹಸಿವು ನೀಗಿಸುವ ಮೂಲಕ ಗಣೇಶ ಭಕ್ತರು ಮತ್ತು ಮಾಜಿ ಸಚಿವರು ಗಮನ ಸೆಳೆದಿದ್ದಾರೆ. ಹೀಗೆ ಹಸಿವಿನಿಂದ ಬಳಲಿದವರಿಗೆ ಬಸವನಾಡಿನ ಗಣೇಶ ಭಕ್ತರು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅನ್ನ ಹಾಕಿದ್ದಾರೆ. ಸಮಾಜ ಸೇವೆಗೆ ನಿಂತು ಸೈ ಎನಿಸಿಕೊಂಡಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಉದ್ಯೋಗವಿಲ್ಲದೇ, ಹೊಟೇಲುಗಳಿಗೆ ತೆರಳಲು ಸಾಧ್ಯವಾಗದೇ, ಆರ್ಥಿಕ ಸಂಕಷ್ಟದಲ್ಲಿದ್ದವರ ಪಾಲಿಗೆ ಇವರು ಈ ಮೂಲಕ ಅನ್ನದಾತರಾಗಿದ್ದಾರೆ. […]