ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ನಿಂದ 34 ಜನ ಗುಣಮುಖ, ಹಲವರ ಜೀವ, ದೃಷ್ಠಿ ರಕ್ಷಣೆ- ಉಪಕುಲಪತಿ ಡಾ. ಆರ್. ಎಸ್. ಮುಧೋಳ
ವಿಜಯಪುರ: ಕೊರೊನಾ ನಂತರ ಕಾಣಿಸಿಕೊಂಡಿರುವ ಬ್ಲಾಕ್ ಫಂಗಸ್ (ಮೈಕಾರಮಿಕೊಸಿಸ್) ಕಾಯಿಲೆಯಿಂದ ಬಳಲಿದ ಹಲವರ ಜೀವ ಮತ್ತು ದೃಷ್ಠಿಯನ್ನು ರಕ್ಷಿಣೆ ಮಾಡಲಾಗಿದೆ ಎಂದು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ತಾವು ಸ್ವತಃ ಇ ಎನ್ ಟಿ ಸರ್ಜನ್ ಆಗಿ 40 ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿದ್ದೇನೆ. ತಮ್ಮ ಸುಧೀರ್ಘ ಸೇವಾವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದ್ದು ಇದೇ ಮೊದಲು. ಈ ಹಿಂದೆ ತೀವ್ರತರ […]
ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಬೇಗ ಮುಗಿಸಲು ಸಂಸದ ರಮೇಶ ಜಿಗಜಿಣಗಿ ಸೂಚನೆ
ವಿಜಯಪುರ: ಬಹುದಿನಗಳಿಂದ ಕುಂಟುತ್ತ ಸಾಗಿರುವ ವಿಜಯಪುರ ನಗರದ ಇಬ್ರಾಹಿಂಪುರ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಸೂಚನೆ ನೀಡಿದ್ದಾರೆ. ಇಬ್ರಾಹಿಂಪುರ ರೇಲ್ವೆ ಗೇಟ್ ಹತ್ತಿರದ ನಿರ್ಮಾಣ ಹಂತದಲ್ಲಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ಅವರು, ಪರಿಶೀಲನೆ ನಡೆಸಿದರು. ಈ ಹಿಂದೆಯೇ ಪೂರ್ಣವಾಗಬೇಕಿದ್ದ ಈ ಕಾಮಗಾರಿ ಕುಂಟುತ್ತ ಸಾಗಿದೆ. ಇದರಿಂದಾಗಿ ಈ ಭಾಗದ ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಕುರಿತು ಸಾರ್ವಜಬಿಕರ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳಕ್ಕೆ […]
ಪೋಷಕರೇ ಹುಷಾರ್: ಆಟವಾಡುತ್ತ ಹೊಟ್ಟೆಯ ಕೆಳಗೆ ಗುಂಡು ಹಾರಿಸಿಕೊಂಡ ಬಾಲಕ ಆಸ್ಪತ್ರೆಗೆ ದಾಖಲು
ವಿಜಯಪುರ: ಪೋಷಕರು ನಿರ್ಲಕ್ಷ್ಯಿಸಿದರೆ ಏನಾಗಬಹುದು ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ. ಯಾವೆಲ್ಲ ವಸ್ತುಗಳು ಎಲ್ಲೆಲ್ಲಿ ಹೇಗೇಗೆ ಸುರಕ್ಷಿತವಾಗಿ ಇಡಬೇಕು ಎಂದು ಜಾಗೃತೆ ವಹಿಸಲೂ ಇದೊಂದು ಉದಾಹರಣೆ ಸಾಕು. ಬಾಲಕನ ಮಕ್ಕಳಾಟದಿಂದ ಆಕಸ್ಮಿಕವಾಗಿ ಹಾರಿದ ಗುಂಡು ಆತನ ತೊಡೆಗೆ ತಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆಸಿದೆ. ಚಡಚಣ ಪಟ್ಟಣದ ಮರಡಿ(ಮಡ್ಡಿ) ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ನಾಲ್ಕು ವರ್ಷದ ಬಾಲಜ ಗಾಯಗೊಂಡಿದ್ದಾನೆ. ಇಂದು ಮಧ್ಯಾಹ್ಯದ ಸುಮಾರು ಮನೆಯಲ್ಲಿದ್ದ ವಾಲಕ ತಿಜೋರಿಯಲ್ಲಿದ್ದ ಗುಂಡುಗಳನ್ನು ಹಾಕಿಡಲಾಗಿದ್ದ […]