ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುಂದವಾನ ಸರಕಾರಿ ಶಾಲೆಗೆ ರೂ. 2.10 ಕೋ. ಅನುದಾನ- ಸಂಸದ ರಮೇಶ ಜಿಗಜಿಣಗಿ ಸಂತಸ

ವಿಜಯಪುರ: ಇದು ನಿಜವಾಗಿಯೂ ಸಂತಸದ ಸುದ್ದಿ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರಕಾರಿ ಇಂಡಿ ತಾಲೂಕಿನ ಗುಂದವಾನ ಸರಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ರೂ. 2.10 ಕೋ. ಅನುದಾನ ಮಂಜೂರು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.

ಈ ಸರಕಾರಿ ಶಾಲೆಯನ್ನು ಆದರ್ಶ ಹಾಗೂ ಮಾದರಿ ಶಾಲೆಯಾಗಿ ರೂಪಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2.1 ಕೋಟಿ ರೂ. ಅನುದಾನ ಮಂಜೂರಾಗಿದೆ. ವಿಜಯಪುರ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂದವಾನ ಶಾಲೆಯ ಪ್ರಗತಿಗೆ ಈ ಅನುದಾನ ಬಿಡುಗಡೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಈ ಮನವಿಗೆ ಸ್ಪಂದಿಸಿರುವ ಪ್ರಾಧಿಕಾರ ಗುಂದವಾನ ಪ್ರಾಥಮಿಕ ಶಾಲೆಯ ಸರ್ವತೋಮುಖ ಪ್ರಗತಿ ಹಾಗೂ ಈ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವ ದೃಷ್ಟಿಯಿಂದ ರೂ. 2.1 ಕೋ. ಅನುದಾನ ಮಂಜೂರು ಮಾಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಮೇಶ ಜಿಗಜಿಣಗಿಕ, ಈ ಬಗ್ಗೆ ಪ್ರಾಧಿಕಾರದ ಅಧಿಕಾರಿಗಳು ಈಗಾಗಲೇ ಜಿಲ್ಲಾಡಳಿತಕ್ಕೆ ಪತ್ರ ಸಹ ಕಳುಹಿಸಿದ್ದಾರೆ. ಶಾಲೆಯ ಪ್ರಗತಿ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಎಂಜನಿಯರಿಂಗ್ ವಿಭಾಗ ಶೀಘ್ರದಲ್ಲಿಯೇ ಟೆಂಡರ್ ಕರೆದು ಆರಂಭಿಸಲಿದೆ ಎಂದು ಸಂಸದರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

ಹೊಸ ಪೋಸ್ಟ್‌