ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಅವಧಿ ಜೂನ್ 30 ರವರೆಗೆ ವಿಸ್ತರಣೆ- ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ

ವಿಜಯಪುರ: ಪ್ರಸಕ್ತ ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಿನಲ್ಲಿ ಪಾವತಿಸಿದರೆ ಮೂಲ ಆಸ್ತಿ ತೆರಿಗೆಯ ಮೇಲೆ ಶೇ. 5 ರಿಯಾಯಿತಿಯನ್ನು ನೀಡಲಾಗಿತ್ತು. ಲಾಕಡೌನ್ ಹಿನ್ನೆಲೆಯಲ್ಲಿ ಈ ರಿಯಾಯಿತಿ ಅವಧಿಯನ್ನು ಜೂ. 30 ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ತಿಳಿಸಿದ್ದಾರೆ.

ಈ ವರ್ಷ ಕೊರೊನಾ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಜಾರಿ ಮಾಡಿದ ಲಾಕಡೌನ ಕಾರಣದಿಂದ ಶೇ. 5ರ ರಿಯಾಯತಿ ಅವಧಿಯನ್ನು ಜೂ. 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕರು ಜೂ. 30ರ ಒಳಗಾಗಿ ಆಸ್ತಿ ತೆರಿಗೆ ಪಾವತಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ವಿನಂತಿ ಮಾಡಿದ್ದಾರೆ.

ಆಸ್ತಿ ತೆರಿಗೆಯನ್ನು ಪಾಲಿಕೆಯ ಆವರಣದಲ್ಲಿರುವ ಕರ್ನಾಟಕ ಒನ್ ಶಾಖೆಯಲ್ಲಿ ಪೆ ಟಿ ಎಮ್ ಆಪ್(PAYTM APP), ರಾಷ್ಟ್ರೀಕೃತ ಬ್ಯಾಂಕುಗಳ ಎಟಿಎಮ್ ಕಾರ್ಡ(ATM card ) ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿಗೆ ಆಸ್ತಿ ತೆರಿಗೆ ಪಾವತಿಸಲು ಬರುವ ಸಾರ್ವಜನಿಕರು ಸರಕಾರದ ಕೊರೊನಾ ಸುರಕ್ಷತಾ ಮಾರ್ಗಸೂಚಿಗಳಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಆಸ್ತಿ ತೆರಿಗೆಯನ್ನು ಪಾವತಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .

Leave a Reply

ಹೊಸ ಪೋಸ್ಟ್‌