ಮಲೇರಿಯಾಮುಕ್ತ ರಾಷ್ಟ್ರ ನಿರ್ಮಾಣಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ಕರೆ

ವಿಜಯಪುರ: 2030 ರೊಳಗಾಗಿ ಭಾರತವನ್ನು ಮಲೇರಿಯಾ ಮುಕ್ತ ದೇಶವನ್ನಾಗಿಸೋಣ. ಈ ನಿಟ್ಟಿನಲ್ಲಿ ಮಾಧ್ಯಮದವರ ಪಾತ್ರ ಬಹು ಮುಖ್ಯವಾದದ್ದು ಎಂದು ವಿಜಯಪುರ ತಾಲೂಕು ಆರೋಗ್ಯಾಧಿಕಾರಿ ಕವಿತಾ ಕರೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಲೇರಿಯಾ ಹಾಗೂ ಮಾಧ್ಯಮ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮದವರು ಹಗಲು-ರಾತ್ರಿ ಎನ್ನದೆ ಇಂಥ ಪರಿಸ್ಥಿತಿ ಮಧ್ಯೆ ಕೊರೊನಾ ನಿಯಂತ್ರಣ ಮಾಡುವಲ್ಲಿ ತುಂಬಾ ಶ್ರಮ ವಹಿಸುತ್ತಿದ್ದಾರೆ. ಮಾಧ್ಯಮಗಳ […]

ಕೃಷ್ಣಾ ನದಿ ನೀರು ಹಂಚಿಕೆ ವಿಚಾರ- ಅಂತಿಮ ಅಧಿಸೂಚನೆಗೆ ಕರ್ನಾಟಕ- ಮಹಾರಾಷ್ಟ್ರ ಜಂಟಿ ಪ್ರಯತ್ನ- ಸಚಿವ ಬೊಮ್ಮಾಯಿ

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ಬ್ರಿಜೇಶ್ ಮಿಶ್ರಾ ನ್ಯಾಯಾಧೀಕರಣ ನೀಡಿರುವ ಐ ತೀರ್ಪಿನ ಕುರಿತು ಅಂತಿಮ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟಿನಲ್ಲಿ ಜಂಟಿ ಹೋರಾಟಕ್ಕೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಿರ್ಧರಿಸಿವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆಯ ಬಳಿಕ […]

ಸಿಎಂ ಜೊತೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರು, ಅಧಿಕಾರಿಗಳ ಸಭೆ- ಕೃಷ್ಣಾ, ಭೀಮಾ ಪ್ರವಾಹ ನಿಯಂತ್ರಣ ಕುರಿತು ನಿರ್ಧಾರ

ಬೆಂಗಳೂರು: ಕೃಷ್ಣಾ ಮತ್ತು ಭೀಮಾ ಪ್ರವಾಹ ನಿಯಂತ್ರಣ ಮತ್ತು ಇತರ ನೀರಾವರಿ ವಿಚಾರಗಳ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಿದ್ದ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ ಪಾಟೀಲ ಮತ್ತು ಅಧಿಕಾರಿಗಳು ಹಾಗೂ ರಾಜ್ಯ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ ನಡೆಸಿದರು. ಈ ಸಭೆಯಲ್ಲಿ ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತು ನಾನಾ ವಿಷಯಗಳ ಕುರಿತು ಚರ್ಚಿಸಲಾಯಿತು. ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ […]

ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂಗೆ ಭರವಸೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ

ವಿಜಯಪುರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಅತೀವೃಷ್ಠಿ ಮತ್ತು ಪ್ರವಾಹ ನಿಯಂತ್ರಣ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿ. ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಭೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕೂಡ ಭಾಗಿಯಾಗಿದರು. ಸಂಭವನೀಯ ಪ್ರವಾಹ ಸಿದ್ಧತೆಗಳ ಬಗ್ಗೆ ಸಿಎಂ‌ ಯಡಿಯೂರಪ್ಪಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದರು. ಚಾಮರಾಜನಗರದಿಂದ ಸಿಎಂ ಸಭೆಗೆ ಹಾಜರಾದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಕಳೆದ ಬಾರಿ ಮಹಾರಾಷ್ಟ್ರ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದ […]