ವಿಜಯಪುರ: ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ವಿಜಯಪುರ ಜಿಲ್ಲೆಗೆ ಆರು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಸಿಂದಗಿ ಮತ್ತು ಅಲಮೇಲ ತಾಲೂಕು ಆಸ್ಪತ್ರೆಗಳಲ್ಲಿ ಹಾಗೂ ಇಂಡಿ ತಾಲೂಕಿನ ತಾಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡುವಂತೆ ವಿಧಾನ ಪರಿಷತ್ಲ ಬಿಜೆಪಿ ಸದಸ್ಯ ಅರುಣ್ ಶಹಾಪುರ ಅವರು ಡಿಸಿಎಂ ಡಾ. ಸಿ. ಎನ್. ಅಶ್ವಥನಾರಾಯಣ ಅವರಿಗೆ ಜೂ. 1 ರಂದು ಪತ್ರ ಬರೆದಿದ್ದರು.
ಅರುಣ ಶಹಾಪುರ ಅವರ ಮನವಿಗೆ ಸ್ಪಂದಿಸಿರುವ ಡಿಸಿಎಂ ಅಮಡಾ. ಸಿ. ಎನ್. ಅಶ್ವತ್ಥನಾರಾಯಣ ಆರು ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದಾರೆ. ಈ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಅರುಣ ಶಹಾಪುರ ಸ್ವೀಕರಿಸಿದ್ದು, ವಿಜಯಪುರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಿದ್ದಾರೆ.
ತಮ್ಮ ಮನವಿಗೆ ಸ್ಪಂದಿಸಿರುವ ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರನ್ನು ಕ್ಷೇತ್ರದ ಜನತೆಯ ಪರವಾಗಿ ವಿಧಾನ ಪರಿಷತ ಬಿಜೆಪಿ ಸದಸ್ಯರಾದ ಅರುಣ ಶಹಾಪುರ ಕೃತಜ್ಞತೆ ಸಲ್ಲಿಸಿದ್ದಾರೆ.