ಗುಮ್ಮಟ ನಗರಿಯಲ್ಲಿ ರೂ. 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾದಕ ದ್ರವ್ಯ ಸುಟ್ಟು ಹಾಕಿದ ಪೊಲೀಸರು

ವಿಜಯಪುರ: ವಿಜಯಪುರ ಜಿಲ್ಲಾ ಪೊಲೀಸರು ಸುಮಾರು ರೂ. 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾದಕ ದ್ರವ್ಯ(ಡ್ರಗ್ಸ್) ನಾಶಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಈ ಡ್ರಗ್ಸ್ ನಾಶ ಪಡಿಸಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದ ಪೊಲೀಸರು

ಎನ್ ಡಿ ಪಿ ಎಸ್ ಕಾಯಿದೆಯಡಿ ವಿಜಯಪುರ ಜಿಲ್ಲೆಯಲ್ಲಿ ಕಳೆದ ವರ್ಷ 40 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ರೂ. 14.08 ಲಕ್ಷಕ್ಕೂ ಹೆಚ್ಚು ಮೌಲ್ಯದ 302.871 ಕೆಜಿ‌ ಗಾಂಜಾ ಮತ್ತು ರೂ. 58 ಸಾವಿರಕ್ಕೂ ಹೆಚ್ಚು ಮೌಲ್ಯದ 45.50 ಕೆ ಅಫೀಮು ವಶಪಡಿಸಿಕೊಳ್ಳಲಾಗಿತ್ತು.

ಈ ಎಲ್ಲ ಮಾದಕ ದ್ರವ್ಯಗಳನ್ನು ಮಾದಕ ವಸ್ತುಗಳ ವಿಲೇವಾರಿ ಸಮಿತಿ ಅಧ್ಯಕ್ಷ ಮತ್ತು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಮತ್ತು ಡಿವೈಎಸ್ಪಿ ಲಕ್ಷ್ಮಿನಾರಾಯಣ ಅವರ ಸಮ್ಮುಖದಲ್ಲಿ ವಿಲೇವಾರಿ ಮಾಡಲಾಯಿತು.

ವಿಜಯಪುರದಲ್ಲಿ ಮಾದಕ ದ್ರವ್ಯ ನಾಶ ಪಡಿಸಿದ ಮಾಡಿದ ಪೊಲೀಸರು

ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕೆಪಿಎಂಪಿ ಟ್ರಸ್ಟ್ ಬಯೋ ಮೆಡಿಕಲ್ ವೇಸ್ಟ್ ಡಿಸ್ಪೋಸಲ್ ಯುನಿಟ್ ನಲ್ಲಿ ಬೆಂಕಿ ಹಚ್ಚಿ ಸುಡುವ ಮೂಲಕ ವಿಲೇವಾರಿ ಮಾಡಲಾಯಿತು ಎಂದು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌