ನಾಟಕ ಅಕಾಡೆಮಿ, ರಂಗಾಯಣಗಳ ನೇತೃತ್ವದ ರಂಗಕರ್ಮಿಗಳ ನಿಯೋಗದಿಂದ ಎಂ ಎಲ್ ಸಿ ಅರುಣ ಶಹಾಪುರ ನೇತೃತ್ವದಲ್ಲಿ ಸಚಿವ ಸುರೇಶ ಕುಮಾರ ಭೇಟಿ

ಬೆಂಗಳೂರು: ನಾಟಕ ಅಕಾಡೆಮಿ ಹಾಗೂ ರಂಗಾಯಣಗಳ ನೇತೃತ್ವದ ರಂಗಕರ್ಮಿಗಳ ನಿಯೋಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್ ಸುರೇಶಕುಮಾರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿತು. ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ, ರಂಗ ಶಿಕ್ಷಕರ ನೇಮಕಾತಿ ಕುರಿತಂತೆ ಚರ್ಚಿಸಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ನಾಟಕ ಅಕಾಡೆಮಿ ಅದ್ಯಕ್ಷ ಆರ್. ಭೀಮಸೇನ, ನಾಟಕ ಅಕಾಡೆಮಿ ಸದಸ್ಯರಾದ ಪ್ರಭುದೇವ ಕಪ್ಪಗಲ್ಲು, ರಂಗ ಕರ್ಮಿಗಳಾದ ಡಾ. ಬಿ. […]

ಕಂದಾಯ ದಿನಾಚರಣೆ ಅಂಗವಾಗಿ ಬಸವ ನಾಡಿನಲ್ಲಿ ರಕ್ತದಾನ ಶಿಬಿರ

ವಿಜಯಪುರ: ಕಂದಾಯ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ಸಸಿ ನೆಡುವ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ವಿಜಯಪುರ ಜಿಲ್ಲಾಧಿಕಾರಿಗಳವರ ಕಚೇರಿಯ ಆವರಣದಲ್ಲಿ ಸಸಿ ನೆಡುವ ಮೂಲಕ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಸರಕಾರಿ ನೌಕರರ ಭವನದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ತಹಸೀಲದಾರ ಸಿದ್ರಾಯ ಭೋಸಗಿ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಜಿ. ಎಸ್. ರಾಜಾಪುರ, ಶಿರಸ್ತೇದಾರರು, […]

ನಾನಾ ಸಂಘ-ಸಂಸ್ಥೆಗಳಿಂದ ವಿಜಯಪುರ ಜಿಲ್ಲಾಡಳಿತಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಕೊಡುಗೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ನಾನಾ ಸಂಘ, ಸಂಸ್ಥೆಗಳು, ದಾನಿಗಳು ವಿಜಯಪುರ ಜಿಲ್ಲೆಗೆ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ನೀಡಿದ್ದು, ಅವುಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಸಂಬಂಧಿಸಿದ ಸರಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ತಿಳಿಸಿದ್ದಾರೆ. ಜೂ. 30 ರಂದು ಬೆಂಗಳೂರಿನ ಸಂಭವ ಫೌಂಡೇಶನ್, 10 ಎಲ್ ಪಿ ಎಂ ಸಾಮರ್ಥ್ಯದ 10 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡಿದೆ. ಅವುಗಳನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಗಿದೆ. ಅಷ್ಟೇ ಅಲ್ಲ ಸಂಭವ ಫೌಂಡೇಶನ್ ಮಂಂಬರುವ ದಿನಗಳಲ್ಲಿ ವೈದ್ಯಕೀಯ ಉಪಕರಣಗಳನ್ನೂ […]

ಜಿ ಎಸ್ ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿ ಎಸ್ ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ನಾಲ್ಕನೇ ವರ್ಷದ ಜಿ ಎಸ್ ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಗಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ […]

ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನೆ ಕಂಪನಿ ಸಿ4ವಿ ಯಿಂದ ರಾಜ್ಯದಲ್ಲಿ ರೂ. 4000 ಕೋ. ಹೂಡಿಕೆಗೆ ಒಪ್ಪಂದ- ಜಗದೀಶ ಶೆಟ್ಟರ

ಬೆಂಗಳೂರು: ಲಿಥಿಯನ್‌- ಅಯಾನ್‌ ಸೆಲ್‌ ಉತ್ಪಾದನೆ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೇರಿಕಾದ ಸಿ4ವಿ ರಾಜ್ಯದಲ್ಲಿ ರೂ. 4000 ಕೋ. ಹೂಡಿಕೆ ಮಾಡಲು ಮುಂದಾಗಿದ್ದು, ಇದು ರಾಜ್ಯದ ಎಲೆಕ್ಟ್ರಿಕ್‌ ಸೆಲ್‌ ಉತ್ಪಾದನೆ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್‌ -ಅಯಾನ್‌ ಸೆಲ್‌(Li-Ion) ಸೆಲ್‌ ಉತ್ಪಾದನಾ ಕಂಪನಿಯ ಪ್ರತಿನಿಧಿಗಳೊಂದಿಗೆ ಒಡಂಬಡಿಕೆಯ ನಂತರ ಮಾತನಾಡಿದ ಅವರು, ಸಿ4ವಿ ಕಂಪನಿ ನೂರಕ್ಕೂ ಹೆಚ್ಚು ಪೇಟೆಂಟ್‌ ಗಳನ್ನು ಹೊಂದಿರುವ […]

ಕೊರೊನಾದಿಂದಾಗಿ ಬಳಲಿದವರಷ್ಟೇ ಸಂಖ್ಯೆಯಲ್ಲಿ ಜನ ಉದ್ಯೋಗ, ಆಹಾರವಿಲ್ಲದೆ ತೊಂದರೆಗೀಡಾಗಿದ್ದಾರೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಜಗತ್ತಿಗೆ ಕಂಟಕದಂತೆ ಎದುರಾಗಿರುವ ಕೊರೊನಾ ಕಾಯಿಲೆಗೆ ತುತ್ತಾಗಿರುವವರ ಸಂಖ್ಯೆಯಷ್ಟೇ ಜನ ಉದ್ಯೋಗ, ಆಹಾರವಿಲ್ಲದೇ ಬಳಲಿದಿದ್ದಾರೆ ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ಐಟಿಐ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವ ಕಟ್ಟಡ ನಿರ್ಮಾಣ ಹಾಗೂ ವಲಸೆ ಕಾರ್ಮಿಕರಿಗೆ ಸುರಕ್ಷಾ(ರಕ್ಷಣಾ) ಮತ್ತು ನೈರ್ಮಲೀಕರಣ ಹಾಗೂ ಆಹಾರ ಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡಿದರು. ಕುಟುಂಬ ನಿರ್ವಹಣೆ […]

ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಡಾಕ್ಟರ್ಸ್ ಗಳ ಬಳಿಕೆ ತೆರಳಿ ಗೌರವಿಸಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್

ವಿಜಯಪುರ: ರಾಷ್ಟ್ರೀಯ ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ವಿಜಯಪುರ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ ತಮ್ಮ ಬೆಂಬಲಿಗರೊಂದಿಗೆ ನಾನಾ ವೈದ್ಯರ ಬಳಿಗೆ ತೆರಳಿ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದಿಂದ ಕೊರೊನಾ ಸಂಕಷ್ಟ ಸಮಯದಲ್ಲಿ ವೈದ್ಯರು ತಮ್ಮ ಪ್ರಾಣದ ಹಂಗು ತೊರೆದು ರೋಗಿಗಳ ಸೇವೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರ ಸೇವೆಯನ್ನು ಸ್ಮರಿಸಲು ಅಬ್ದುಲ್ ಹಮೀದ್ ಮುಶ್ರೀಫ್ ನಾನಾ ವೈದ್ಯರ ಬಳಿಗೆ ತೆರಳಿ ಸನ್ಮಾನಿಸಿದರು. ಮೊದಲಿಗೆ ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]

ಡಾಕ್ಟರ್ಸ್ ಗಳಿಗೆ ರಾಷ್ಟ್ರೀಯ ವೈದ್ಯರ ದಿನದ ಶುಭಾಷಯ ಕೋರಿದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಎಲ್ಲ ಡಾಕ್ಟರ್ಸ್ ಗಳಿಗೆ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ. ವೈದ್ಯರು ಹಿಂದಿನ ಕಾಲದಿಂದಲೂ ಸಮಾಜಕ್ಕೆ, ದೇಶಕ್ಕೆ, ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂದು ಜನರ ಪ್ರಾಣ ರಕ್ಷಣೆ, ಆರೋಗ್ಯ ಸುಧಾರಿಸಲು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ವೈದ್ಯರ ಸೇವೆಯನ್ನು ಸ್ಮರಿಸಿದ್ದಾರೆ. ಕಳೆದ ಒಂದು […]

ಇಂದು ರಾಷ್ಟ್ರೀಯ ವೈದ್ಯರದ ದಿನ- ವೈದ್ಯರು ಭೂಮಿ ಮೇಲಿನ ದೇವರು

ಡಾ. ರವಿ ಎಸ್. ಕೋಟೆಣ್ಣವರ,ಹೋಮಿಯೋಪಥಿ ಖ್ಯಾತ ವೈದ್ಯರು ವಿಜಯಪುರ: ನಾವು ಭೂಮಿಯ ಮೇಲೆ ದೇವರನ್ನು ನೋಡಲು ಸಾಧ್ಯವಿಲ್ಲ ಎನ್ನುವುದು ಎಲ್ಲರು ತಿಳಿದಿರುವ ಸತ್ಯ. ಆದರೆ ನಮ್ಮ ಆರೋಗ್ಯವನ್ನು ಉತ್ತಮ ಗೊಳಿಸಿ, ನಮ್ಮನ್ನು ಆರೈಕೆ ಮಾಡುವ ವೈದ್ಯರುಗಳೇ ದೈವ ಶಕ್ತಿಯನ್ನು ಪಡೆದುಕೊಂಡು, ಕಣ್ಣೆದುರಿಗೆ ನಿಲ್ಲುವ ದೇವರು ಎಂದು ಹೇಳಬಹುದು. ಈ ಕೋವಿಡ್ ಹೆಮ್ಮಾರಿ ವೈದ್ಯನೇ ಭೂಮಿಯ ಮೇಲಿನ ದೈವ ಎಂದು ಜನಸಾಮನ್ಯರಿಗೆ ಸಾಬಿತು ಪಡೆಸಿದೆ. ಜುಲೈ ಒಂದರಂದು ಭಾರತದಲ್ಲಿ ವೈದ್ಯರ ದಿನ ಆಚರಿಸಲಾಗುತ್ತದೆ. ಅಲೋಪತಿ, ಹೋಮಿಯೋಪತಿ, ಆಯುವೇ೯ದ. ಯುನಾನಿ […]

ವಿಜಯಪುರ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 45ನೇ ಸ್ಥಾನ

ವಿಜಯಪುರ: ಟೈಮ್ಸ್ ಎಂಜಿನಿಯರಿಂಗ್ ಸಂಸ್ಥೆ ನಡೆಸಿದ ರಾಷ್ಟ್ರೀಯ ಎಂಜಿನಿಯರಿಂಗ್ ಕಾಲೇಜುಗಳ ಸಮೀಕ್ಷೆಯಲ್ಲಿ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜು ರಾಷ್ಟ್ರೀಯ ಮಟ್ಟದಲ್ಲಿ 45ನೇ ಸ್ಥಾನ ಪಡೆದು ಗಮನ ಸೆಳೆದಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಕಾಲೇಜಿನ ಪ್ರಾಚಾರ್ಯ ಡಾ. ಅತುಲ ಆಯಿರೆ, ದೇಶದಲ್ಲಿಯೇ ಪ್ರಖ್ಯಾತ ಟೈಮ್ಸ್ ಸಂಸ್ಥೆಯು ಅಂಗ ಸಂಸ್ಥೆ ಟೈಮ್ಸ್ ನಾನಾ ಎಂಜಿನಿಯರಿಂಗ್ ಕಾಲೇಜುಗಳ ಮೂಲಭೂತ ಸೌಕರ್ಯಗಳು, ತಂತ್ರಜ್ಞಾನದ ಅನುಭವ, […]