ವಿಜಯಪುರ: ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಎಲ್ಲ ಡಾಕ್ಟರ್ಸ್ ಗಳಿಗೆ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ. ವೈದ್ಯರು ಹಿಂದಿನ ಕಾಲದಿಂದಲೂ ಸಮಾಜಕ್ಕೆ, ದೇಶಕ್ಕೆ, ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂದು ಜನರ ಪ್ರಾಣ ರಕ್ಷಣೆ, ಆರೋಗ್ಯ ಸುಧಾರಿಸಲು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ವೈದ್ಯರ ಸೇವೆಯನ್ನು ಸ್ಮರಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಕೊರೊನಾ ಮಹಾಮಾರಿ ಅಪ್ಪಳಿಸಿದಾಗಿನಿಂದ ಡಾಕ್ಟರ್ ಗಳು ಜಗತ್ತಿನಲ್ಲಿ, ದೇಶದಲ್ಲಿ, ರಾಜ್ಯದಲ್ಲಿ ಮತ್ತು ನಮ್ಮ ಜಿಲ್ಲೆಯಲ್ಲಿ ಮಾಡಿದ್ದಾರೆ. ಸಾವಿರಾರು ವೈದ್ಯರು ಜನರ ರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಇಂಥ ಸಂದರ್ಭದಲ್ಲಿ ಅವರೆಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸಬೇಕಾಗಿರುವುದು ನಮ್ಮ ಕರ್ತವ್ಯ. ಜನಕಲ್ಯಾಣಕ್ಕಾಗಿ ದುಡಿಯುತ್ತಿರುವ ವೈದ್ಯರಿಗೆ ಡಾಕ್ಟರ್ಸ್ ಡೆ ಶುಭಾಷಯಗಳು ಎಂದು ಎಂ. ಬಿ. ಪಾಟೀಲ ಟ್ವೀಟ್ ಮೂಲಕ ಶುಭ ಕೋರಿ ಕೃತಜ್ಞತೆ ಸಲ್ಲಿಸಿದ್ದಾರೆ.