ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಯತ್ನಾಳ

ಮೈಸೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.

ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ಮಹಾಮಾರಿಯನ್ನು ತೊಲಗಿಸಿ, ನಾಡಿನ ಜನತೆಗೆ ನೆಮ್ಮದಿಯ ದಿನಗಳನ್ನು ಕರುಣಿಸಲೆಂದು ಜಗನ್ಮಾತೆ ಚಾಮುಂಡೇಶ್ವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Leave a Reply

ಹೊಸ ಪೋಸ್ಟ್‌