ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈಧ್ಯಕೀಯ ಮಹಾವಿದ್ಯಾಲಯದ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಪ್ರವೀಣ ರಾ. ಶಹಾಪುರ ಅವರನ್ನು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಿ-ಕ್ಲಿನಿಕಲ್ ಸ್ನಾತಕೋತ್ತರ ವಿಭಾಗಕ್ಕೆ ಅಧ್ಯಯನ ಮಂಡಳಿಯ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ.
ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಈ ಕುರಿತು ಅಧಿಸೂಚನೆ ಬಿಡುಗಡೆ ಹೊರಡಿಸಿದೆ.
ಈ ನಾಮನಿರ್ದೇಶನಕ್ಕೆ ಡಾ. ಪ್ರವೀಣ ರಾ. ಶಹಾಪುರ ಸಂತಸ ವ್ಯಕ್ತಪಡಿಸಿದ್ದಾರೆ.