ಕಾರ್ಮಿಕ ಇಲಾಖೆಯಿಂದ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ವಿತರಣೆ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆಯಿತು.

ಕಾರ್ಮಿಕ ಅಧಿಕಾರಿ ಮತ್ತು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಹೆಸರು ನೋಂದಾಯಿಸಿಕೊಂಡ ಕಟ್ಟಡ ಕಾರ್ಮಿಕರ ಆರೋಗ್ಯದ ಹಿತರಕ್ಷಣೆಗಾಗಿ ಮತ್ತು ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪವಿಭಾಗಾಧಿಕಾರಿ ರಾಹುಲ ಶಿಂಧೆ, ಇಂಡಿ ತಹಶೀಲ್ದಾರ ಸಿ, ಎಸ್, ಕುಲಕರ್ಣಿ, ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ, ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ನಿರೀಕ್ಷಕ ಎಸ್. ಜಿ. ಖೈನೂರ, ಇಂಡಿ ವೃತ್ತ ಇಂಡಿ ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ ಕೂಡ ಕಟ್ಟಡ ಕಾರ್ಮಿಕರಿಗೆ ಫುಡಕಿಟ್ ಗಳನ್ನು ವಿತರಿಸಿದರು.

ಈ ಮಧ್ಯೆ, ಕಾರ್ಮಿಕ ಇಲಾಖೆಯಿಂದ ಸಿಗುವ ಸಾಮಾಜಿಕ ಸೇವಾ, ಸೌಲಭ್ಯಗಳಾದ ಮದುವೆ ಧನಸಹಾಯ, ಶೈಕ್ಷಣಿಕ ಸೌಲಭ್ಯ, ಹೆರಿಗೆ, ವೈದ್ಯಕೀಯ ಮುಂತಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಪಡೆಯಬೇಕು ಎಂದು ವಿಜಯಪೂರ ಜಿಲ್ಲೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್. ಜಿ. ಖೈನೂರ ಅವರು ಎಲ್ಲಾ ಕಟ್ಟಡ ಕಾರ್ಮಿಕರಿಗೆ ಕೋರಿದ್ದಾರೆ.

Leave a Reply

ಹೊಸ ಪೋಸ್ಟ್‌