ಪಡಿತರ ಚೀಟಿದಾರರು ಇ -ಕೆವೈಸಿ ಮಾಡಿಸುವ ಪ್ರಕ್ರಿಯೆ ಪ್ರಾರಂಭ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಪಡಿತರ ಚೀಟಿದಾರರು ನ್ಯಾಯ ಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸುವ ಪ್ರಕ್ರಿಯೆಯನ್ನು ಕೊರೊನಾ ಲಾಕಡೌನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಇ-ಕೆವೈಸಿ ಮಾಡಿಸುವ ಕಾರ್ಯ ಆಯಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಜು. 1 ರಿಂದ ಪುನಾರಂಭವಾಗಿದೆ ಎಂದು ಜಿಲ್ಲಾಧಿಕಾರಿ ಪಿ, ಸುನೀಲ ಕುಮಾರ ತಿಳಿಸಿದ್ದಾರೆ.

ಈ ಸಂಬಂಧ ಎಲ್ಲಾ ನ್ಯಾಯ ಬೆಲೆ ಅಂಗಡಿಯವರಿಗೂ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಗಳನ್ನು ಆಯಾ ಪಡಿತರ ಚೀಟಿದಾರರನ್ನು ನ್ಯಾಯ ಬೆಲೆ ಅಂಗಡಿಗೆ ಕರೆಯಿಸಿ ಇ-ಕೆವೈಸಿ ಮಾಡಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಇ-ಕೆವೈಸಿ ಮಾಡಿಸದೇ ಇರುವ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರು ಕುಟುಂಬದ ಸದಸ್ಯರೆಲ್ಲ ಸೇರಿ ನ್ಯಾಯ ಬೆಲೆ ಅಂಗಡಿಯಲ್ಲಿ ಜು. 19 ರೊಳಗೆ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ.

ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಗಳಲ್ಲಿನ ಸದಸ್ಯರಿಗೆ ಮುಂಬರುವ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಇ-ಕೆವೈಸಿ ಮಾಡಿಸಲು ನ್ಯಾಯ ಬೆಲೆ ಅಂಗಡಿಗಳಿಗೆ ತೆರಳುವ ಪಡಿತರ ಚೀಟಿದಾರರು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ‌ ಪಿ. ಸುನೀಲ‌ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌