ವಿಜಯಪುರ: ಕೊರೊನಾ ಮತ್ತು ಲಾಕಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಮತ್ತು ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಅವರು ಆಹಾರ ಕಿಟ್ ವಿತರಿಸಿದರು.
ವಿಜಯಪುರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಮಿಕ ಅಧಿಕಾರಿ ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಹೆಸರು ನೋಂದಾಯಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಜಿಲ್ಲಾ ಕಾರ್ಮಿಕ ಇಲಾಖೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಕಾರ್ಮಿಕ ಇಲಾಖೆಯಿಂದ ಸಿಗುವ ಸಾಮಾಜಿಕ ಸೇವಾ ಸೌಲಭ್ಯಗಳಾದ, ಮದುವೆ ಧನ ಸಹಾಯ, ಶೈಕ್ಷಣಿಕ ಸೌಲಭ್ಯ, ಹೆರಿಗೆ, ವೈದ್ಯಕೀಯ ಸೌಲಭ್ಯ ಇನ್ನಿತರ ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಪಡೆಯಬೇkಕು ಎಂದು ಸಲಹೆ ನೀಡಿದರು.
ಕಾರ್ಮಿಕ ಅಧಿಕಾರಿಗಳಾದ ಅಧಿಕಾರಿಗಳಾದ ಎಸ್. ಜಿ. ಖೈನೂರ, ಕಾರ್ಮಿಕ ನಿರೀಕ್ಷಕರಾದ ಜಗದೇವಿ ಮತ್ತು ಉಮಾಶ್ರೀ ಕೋಳಿ ಅವರು ಫುಡ್ ಕಿಟ್ ಗಳ ವಿತರಣೆ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅಪ್ಪು ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರು ಉಪಸ್ಥಿತರಿದ್ದರು.