ಬೆಂಗಳೂರು- ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರಚಂದ ಗೆಹ್ಲೋಟ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು.
ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ನಾನಾ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.