ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಪುರಸಭೆ ಕಾರ್ಯಾಲಯ ಮತ್ತು ಮೆಗಾ ಮಾರ್ಟ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಕಾಮಗಾರಿಗೆ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮತ್ತು ಚಮಕೇರಿ ಸದಾಶಿವ ಮಠಾಧೀಶ ಶಿವಯ್ಯ ಮಹಾಸ್ವಾಮಿಗಳು ಹಾಗೂ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಹುಲ ಶಿಂಧೆ ಸೇರಿದಂತೆ ನಾನಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.