ಸ್ಥಳ ಪರಿಶೀಲನೆ ಅಧಿಕಾರಿಗಳ ಹುದ್ದೆ ಸೃಷ್ಟಿ ಅಮಿತ್ ಶಾ ಕನಸಿನ ಕೂಸು- ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ- ಸಚಿವ ಬೊಮ್ಮಾಯಿ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕೃತ್ಯ ಸ್ಥಳ ಪರಿಶೀಲನೆ ಅಧಿಕಾರಿಗಳ ಹುದ್ದೆ ಸೃಷ್ಟಿ ಮಾಡಲಾಗಿದೆ. ದೇಶದ ಎಲ್ಲ ಪೊಲೀಸ್ ಮಹಾನಿರ್ದೇಶಕರ ಸಭೆಯಲ್ಲಿ ಅಮಿತ್ ಶಾ ಈ ರೀತಿಯ ಅಧಿಕಾರಿಗಳ ನೇಮಕದ ಸಲಹೆ ನೀಡಿದ್ದರು. ಇದು ಅಮಿತ ಶಾ ಅವರ ಕನಸಿನ ಕೂಸು ಮತ್ತು ಇಚ್ಛೆಯಂತೆ ಈ ಹುದ್ದೆಯನ್ನು ಸೃಷ್ಟಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ […]
16 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನನ್ನ ಕನಸಿನ ಕೂಸು- ಇದರ ಬಗ್ಗೆ ಮಾತನಾಡಲು ಯಾರ ಅನುಮತಿ ಬೇಕಿಲ್ಲ- ಎಂ. ಬಿ. ಪಾಟೀಲ
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 16 ಕೆರೆಗಳನ್ನು ತುಂಬಿಸುವ ಯೋಜನೆ ನನ್ನ ಕನಸಿನ ಕೂಸು. ಈ ಯೋಜನೆಯ ಬಗ್ಗೆ ಮಾತನಾಡಲು ಯಾರ ಅನುಮತಿಯೂ ಬೇಕಿಲ್ಲ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಶಾಸಕನಾಗಿದ್ದಾಗ ನೀರಾವರಿ ಯೋಜನೆಗಳ ಬಗ್ಗೆ ಮಾತನಾಡಿದ್ದೇನೆ. ಜಲಸಂಪನ್ಮೂಲ ಸಚಿವನಾಗಿದ್ದಾಗಲೂ ಮಾತನಾಡಿದ್ದೇನೆ. ಮುಂದೆಯೂ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ತಿಡಗುಂದಿ ಅಕ್ವಾಡಕ್ಟ್ ಮೂಲಕ 16 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮೂಲ ಮತ್ತು ಪರಿಷ್ಕೃತ ಯೋಜನೆಯಲ್ಲಿ […]
ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಅನುಮತಿ ಬೇಕಿಲ್ಲ-ಈ ಬಗ್ಗೆ ಚರ್ಚಿಸಲು ಸರಕಾರ ಸರ್ವಪಕ್ಷ ಸಭೆ ಕರೆಯಬೇಕು-ಮಾಜಿ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಅನುಮತಿ ಬೇಕಿಲ್ಲ ಈ ಕುರಿತು ಚರ್ಚಿಸಲು ಸರಕಾರ ಸರ್ವಪಕ್ಷ ಸಭೆ ಕರೆಯಬೇಕು ಮಾಜಿ ಸಚಿವ ಎಂ. ಬಿ. ಪಾಟೀಲ ಆಗ್ರಹ ವಿಜಯಪುರ: ಮೇಕೆದಾಟು ಯೋಜನೆ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡು ಅನುಮತಿ ಬೇಕಿಲ್ಲ ಎಂದು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಮೇಕೆದಾಟು ವಿಚಾರ ಕುರಿತು ಚರ್ಚಿಸಲು ರಾಜ್ಯ ಸರಕಾರ ಸರ್ವ ಪಕ್ಷಗಳ ಮತ್ತು ನೀರಾವರಿ ಇಲಾಖೆ ಮಾಜಿ ಸಚಿವರ ಸಭೆ […]